ಶಿವಮೊಗ್ಗ:ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ‌ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.
ಆರು ದಿನದ ಹಿಂದೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಲ್ಲಾಪುರ ಗ್ರಾಮದ ಮಂಜಮ್ಮ(30), ಇವರ ಮಕ್ಕಳಾದ ರಚನಾ, ಯಮುನಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.18ರಂದು ಮಂಜುಳಾ ತನ್ನ ಮಕ್ಕಳೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಡಿ.21 ರಂದು ಹೊಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.ಇದನ್ನೂ ಓದಿರಿ‘ಎಣ್ಣೆ’ ಮತ್ತಲ್ಲಿ ಬಂದ ಅಣ್ಣನಿಗೆ ಬಿಯರ್​ ಬಾಟಲಿಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ತಂಗಿ!
ಗುರುವಾರ ಬೆಳಗ್ಗೆ ಮಲ್ಲಾಪುರ ಕೆರೆಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ತಾಯಿ ಹಾಗೂ ಮಕ್ಕಳ ಶವ ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನಿಖರ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.
ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

ಮನೆ ಪಾಠ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
