ಬೆಳಗಾವಿ:ಮಳೆಗಾಲದಲ್ಲಿ ನಾನಾ ರೀತಿಯ ದುರಂತಗಳು ಸಂಭವಿಸುತ್ತಿರುತ್ತವೆ, ಸಾವು-ನೋವುಗಳು ಕೂಡ. ಅಂಥದ್ದೇ ಒಂದು ಪ್ರಕರಣದಲ್ಲಿ ಐದು ವರ್ಷದ ಮಗುವಿನ ಜತೆಗೆ ತಾಯಿ ಕೂಡ ಸಾವಿಗೀಡಾದ ದುರಂತವೊಂದು ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಕುಸಿದು ಈ ದುರಂತ ಸಂಭವಿಸಿದೆ. ಇದರಲ್ಲಿ ಐದು ವರ್ಷದ ಪ್ರಜ್ವಲ್​ ಹಾಗೂ ಆತನ ತಾಯಿ ಯಲ್ಲವ್ವ ಮಹಾದೇವ ಬಾಗಿಲದ (40) ವರ್ಷ ಸಾವಿಗೀಡಾಗಿದ್ದಾರೆ.
ಮಹಾದೇವ ಲಕ್ಷ್ಮಪ್ಪ ಬಾಗಿಲದ ಇವರಿಗೆ ಈ ಮನೆ ಸೇರಿದ್ದು, ದುರಂತ ಸಂಭವಿಸಿದ ‌ಸ್ಥಳಕ್ಕೆ ತಹಶೀಲ್ದಾರ್ ಮಹಾಂತೇಶ ಮಠದ, ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ಐ ಬಸನಗೌಡ ನಿರ್ಲಿ, ಎಎಸ್ಐ ವೈ.ಎಂ. ಕಡಕೋಳ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಇನ್ನೇನು ಪರಿಚಯ ರೊಮ್ಯಾನ್ಸ್​ಗೆ ತಿರುಗಬೇಕು ಎನ್ನುವಷ್ಟರಲ್ಲಿ…’: ಹೀಗಂದಿದ್ದೇಕೆ ಅನೂಪ್​ ಭಂಡಾರಿ?

ತೆರೆ ಮೇಲೆ ರಾರಾಜಿಸಲಿದ್ದಾರೆ ‘ಜೂನಿಯರ್’ ಜನಾರ್ದನ ರೆಡ್ಡಿ; ಕಿರೀಟಿ ಹೊಸ ಸಿನಿಮಾ ಟೈಟಲ್​ ಲಾಂಚ್..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + 8 =
Remember me
