ದಾವಣಗೆರೆ:ಪದವಿ ವ್ಯಾಸಂಗಕ್ಕಾಗಿ ಕಾಲೇಜಿಗೆ ಸೇರುವುದು ಬೇಡ ಎಂದು ಹೇಳಿದ ಒಂದೇ ಕಾರಣಕ್ಕೆ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆಯೊಂದು ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉಜ್ಜಪ್ಪ ವಡೆಯರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ.
ಉಜ್ಜಪ್ಪ ವಡೆಯರಹಳ್ಳಿ ಗ್ರಾಮದ ರಕ್ಷಿತಾ (19) ಮೃತ ವಿದ್ಯಾರ್ಥಿನಿ. ಈಕೆ ಚಂದ್ರಮ್ಮ-ನಾಗರಾಜ್​ ದಂಪತಿಯ ಪುತ್ರಿ. ಈ ಯುವತಿಯ ತಂದೆ ಮೃತಪಟ್ಟಿದ್ದು, ತಾಯಿಯೇ ಕುಟುಂಬ ನಿರ್ವಹಣೆ ಮಾಡಬೇಕಿದೆ. ಅಲ್ಲದೆ ಬಡತನ ಇರುವುದರಿಂದ ಪದವಿ ಶಿಕ್ಷಣಕ್ಕೆ ಸೇರುವುದು ಬೇಡ ಎಂದು ತಾಯಿ ಹೇಳಿದ್ದರು.
ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮುಗಿಸಿದ್ದ ಯುವತಿ, ಪದವಿ ಶಿಕ್ಷಣಕ್ಕೆ ಸೇರಲಾಗುತ್ತಿಲ್ಲ ಎಂಬ ಬೇಸರದಿಂದ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ

ನಮಗದು ಚಿನ್ನಕ್ಕಿಂತಲೂ ಹೆಚ್ಚು; ಒಲಿಂಪಿಕ್ಸ್​ ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿಯ ಗ್ರಾಮಸ್ಥರು ಹೀಗಂದಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
