ಬೆಳಗಾವಿ:ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿಯನ್ನು ಕೇಳಿ ತಾಯಿ ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಖನಗಾವಿಯ ಕೆ.ಎಚ್. ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಬೆಳಗಾವಿ ಜಾಧವ್ ನಗರದಲ್ಲಿ ಇಂದು ಮಧ್ಯಾಹ್ನ ಕಟ್ಟಡದ ಕೆಲಸದಲ್ಲಿ ತೊಡಗಿದ್ದ ಸಿದ್ದರಾಯಿ ಮಿರಜಕರ್​ ಎಂಬಾತನ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಇದರಿಂದ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದ ಸಿದ್ದರಾಯಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚಿರತೆ ದಾಳಿಯ ಆಘಾತದಿಂದ ಚೇತರಿಸಿಕೊಂಡು ಮನೆಗೆ ಮರಳಿದ ಸಿದ್ದರಾಯಿಗೆ ಮತ್ತೊಂದು ಆಘಾತ ಎದುರಾಗಿತ್ತು. ಏಕೆಂದರೆ ಅಷ್ಟರಲ್ಲಾಗಲೇ ಮಗ ಸಿದ್ದರಾಯಿ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿದ ತಾಯಿ ತಾಯಿ ಶಾಂತಾ ಮಿರಜಕರ್ (65) ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

ಡಿಸೆಂಬರ್ 35ರ ಒಳಗೆ ಬಸವೇಶ್ವರ ಏತ ನೀರಾವರಿ ಯೋಜನೆ ಉದ್ಘಾಟನೆ: ಶಾಸಕರ ಭರವಸೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
