ವಿಜಯಪುರ:ತಾಯಿಯೊಬ್ಬಳು ತನ್ನ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ, ಬಳಿಕ ಅದೇ ಹೊಂಡಕ್ಕೆ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ತಿಕೋಟಾ ತಾಲೂಕಿನ ತೊರವಿ ತಾಂಡಾ-1ರ ತೋಟದಲ್ಲಿ ಈ ಪ್ರಕರಣ ನಡೆದಿದೆ.
ಅನಿತಾ ಪಿಂಟು ಜಾಧವ್ (27) ಮೂರು ಮಕ್ಕಳೊಂದಿಗೆ ‌ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪ್ರವೀಣ (6), ಸುದೀಪ (4), ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ‌ ಹೊಂಡದಲ್ಲಿ ಎಸೆದು ನಂತರ ತಾನೂ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಾಲ್ಕು ಜನರ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಾಂಬಾರು ಪಾತ್ರೆಗೆ ಬಿದ್ದು ಬಿಸಿಯೂಟದ ಅಡುಗೆ ಸಹಾಯಕಿ ಸಾವು!

ಕೋವಿಡ್​ನಿಂದಾಗಿ ಏನೂ ನೆನಪಿಲ್ಲ; ಇ.ಡಿ. ವಿಚಾರಣೆ ವೇಳೆ ಬಂಧಿತ ಸಚಿವನ ಉತ್ತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
