ರಾಮನಗರ:ಹೆಣ್ಣು ಕೊಟ್ಟ ಅತ್ತೆ, ಕಣ್ಣು ಕೊಟ್ಟ ದೇವರಿಗೆ ಸಮ ಅಂತಾರೆ. ಆದರೆ ಇಲ್ಲೊಬ್ಬ ಭೂಪ ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಕೊಂದಿದ್ದಾನೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತುಳಸಿದೊಡ್ಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಅಳಿಯನಿಂದಲೇ ಅತ್ತೆ ವಿಜಯಲಕ್ಷ್ಮೀ (65) ಕೊಲೆಯಾಗಿದ್ದಾರೆ. ಆರೋಪಿ ಭೀಮಾನಾಯ್ಕ(40)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟಕ್ಕೂ ಆತ ಅತ್ತೆಯನ್ನ ಕೊಂದದ್ದು ಏಕೆ ಗೊತ್ತಾ?ಇದನ್ನೂ ಓದಿರಿಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ
ವಿಜಯಲಕ್ಷ್ಮೀ ತನ್ನಗಿದ್ದ ಒಬ್ಬಳೇ ಮಗಳನ್ನು ಭೀಮಾನಾಯ್ಕನಿಗೆ ಕೊಟ್ಟು ಮದುವೆ ಮಾಡಿದ್ದಳು. ಕೂಲಿ ಕೆಲಸ ಮಾಡಿಕೊಂಡಿದ್ದ ಭೀಮಾನಾಯ್ಕ ಮದ್ಯವ್ಯಸನಿಯಾಗಿದ್ದ. ನಿತ್ಯ ಕುಡಿದ ಅಮಲಿನಲ್ಲಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಹಾಗಾಗಿ ವಿಜಯಲಕ್ಷ್ಮೀಯೇ ಗಂಡ, ಮಗಳು, ಅಳಿಯನ ಜವಾಬ್ದಾರಿ ಹೊತ್ತುಕೊಂಡು ಕೂಲಿ ಕೆಲಸ ಮಾಡುತ್ತಾ ಸಂಸಾರ ದೂಗಿಸಿಕೊಂಡು ಹೋಗುತ್ತಿದ್ದಳು. ನಿನ್ನೆ(ಶುಕ್ರವಾರ) ರಾತ್ರಿ ಮನೆಗೆ ಬಂದ ಅಳಿಯ, ನನ್ನ ಬಳಿ ಮದ್ಯ ಖರೀದಲು ಹಣ ಇಲ್ಲ ಕೊಡು ಎಂದು ಅತ್ತೆಯನ್ನ ಕೇಳಿದ್ದಾನೆ.
ಸದ್ಯಕ್ಕೆ ಹಣ ಇಲ್ಲ ಎಂದ ಅತ್ತೆ ಮೇಲೆ ಸಿಟ್ಟಿಗೆದ್ದ ಅಳಿಯ, ಮನ ಬಂದಂತೆ ಥಳಿಸಿ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಅತ್ತೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಕೊಲೆ ಆರೋಪಿಯನ್ನ ಬಂಧಿಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
