ಹಾವೇರಿ:2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಂತೆ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದ್ದು, ಇದರಿಂದ ಬರುವ ಹಣದಿಂದ ಬಹಳಷ್ಟು ಮಹಿಳೆಯರು ಅನುಕೂಲ ಪಡೆದುಕೊಂಡಿದ್ದಾರೆ.
ಅದರಂತೆ ಈ ಹಿಂದೆ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮೊಬೈಲ್​, ಕಣ್ಣಿನ ಶಸ್ತ್ರಚಿಕಿತ್ಸೆ, ಫ್ರಿಡ್ಜ್​, ಹೋಳಿಗೆ ಊಟ ಹಾಕಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ತಮ್ಮ ಸೊಸೆಗೆ ಫ್ಯಾನ್ಸಿ ಸ್ಟೋರ್​ ಹಾಕಿ ಕೊಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನೀರಲಗಿ ಗ್ರಾಮದಲ್ಲಿ ನಡೆದಿದೆ.
ನೀರಲಗಿ ಗ್ರಾಮದ ದಾಕ್ಷಾಯಿಣಿ ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣ ಅಂದರೆ 20 ಸಾವಿರ ರೂಪಾಯಿಗಳನ್ನು ಕೂಡಿಟ್ಟು ಸೊಸೆ ಕುಮಾರಿ ಶಿವನಗೌಡ ಪಾಟೀಲ್​ಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಟ್ಟಿದ್ದಾರೆ. ಶ್ರಾವಣ ಮಾಸದ ಶುಭ ಮಂಗಳವಾರದಂದು ಫ್ಯಾನ್ಸ್​ ಸ್ಟೋರ್​ಅನ್ನು ಉದ್ಘಾಟನೆ ಮಾಡಲಾಗಿದ್ದು, ಅತ್ತೆ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇದಲ್ಲದೆ ಅಂಗಡಿ ಉದ್ಘಾಟನೆ ವೇಳೆ ಅತ್ತೆ-ಸೊಸೆ ಭಾವುಕರಾಗಿದ್ದು, ಈ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ:ಆರ್​ಸಿಬಿ ಸೇರ್ತಾರೆ ಎಂಬ ಸುದ್ದಿ ನಡುವೆಯೇ ಕುತೂಹಲ ಮೂಡಿಸಿದ ಕೆ.ಎಲ್. ರಾಹುಲ್​ ನಡೆ!
ಅಂಗಡಿ ಉದ್ಘಾಟನೆ ಬಳಿಕ ಮಾತನಾಡಿದ ದಾಕ್ಷಾಯಿಣಿ, ಸೊಸೆ ಮಗಳಿದ್ದಂಗೆ, ಅವಳು ಹೊರಗೆ ದುಡಿಯೋಕೆ ಹೋಗೋದು ಬೇಡ ಅಂತ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟಿದ್ದೇವೆ. ಹತ್ತು ಕಂತಿನ ಹಣವನ್ನ ಕೂಡಿಟ್ಟು ಮನೆಯಲ್ಲೇ ಅಂಗಡಿ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಸೊಸೆ ಕುಮಾರಿ ಮಾತನಾಡಿ ಹತ್ತು ಕಂತಿನ ಹಣವನ್ನ ಕೂಡಿಟ್ಟು ನಮ್ಮ ಅತ್ತೆ-ಮಾವ ನನಗೆ ಅಂಗಡಿ ಹಾಕಿಕೊಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೂಲಿ ಕೆಲಸಕ್ಕೆ ಹೊಲಕ್ಕೆ ಹೋಗಬೇಕು. ಗೃಹಲಕ್ಷ್ಮೀ ಹಣದಿಂದ ಅಂಗಡಿ ಪ್ರಾರಂಭವಾಗಿದೆ ಎಂದು ಸೊಸೆ ಭಾವುಕರಾಗಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಲವರಿಗೆ ಉಪಯೋಗವಾಗಿದ್ದು, ಕೆಲವೆಡೆ ಹಣ ಬಾರದೇ ಜನರು ಇನ್ನೂ ಹಿಡಿಶಾಪ ಹಾಕುತ್ತಿದ್ದಾರೆ. ಈ ಹಿಂದೆ ಗೃಹಲಕ್ಷ್ಮಿ ಯೋಜನೆ ಜಾರಿಯಾಗುವ ಮುನ್ನ ಅತ್ತೆ-ಸೊಸೆ ನಡುವಿನ ಗಲಾಟೆಗೆ ಇದು ಕಾರಣವಾಗುತ್ತದೆ ಎಂದು ಟೀಕಿಸಲಾಗಿತ್ತು. ಆದರೆ, ಇದೀಗ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಅತ್ತೆ ಸೊಸೆಗೆ ಅಂಗಡಿ ಹಾಕಿಕೊಟ್ಟಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:18 − sixteen =
Remember me
