ಕೋಲಾರ:ಮಕ್ಕಳೊಂದಿಗೆ ಪಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳ ಸಾಲಿಗೆ ಇದೊಂದು ಹೊಸ ಸೇರ್ಪಡೆ. ದುರಂತವೆಂದರೆ ಇಲ್ಲಿ ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಒಬ್ಬರ ದುಡುಕಿನ ನಿರ್ಧಾರದಿಂದಾಗಿ ಇಬ್ಬರು ಜೀವ ಕಳೆದುಕೊಂಡಂತಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೀರ್ತಿ (23) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ತಾಯಿ. ಯೋಗಶ್ರೀ ತಾಯಿಯೊಂದಿಗೆ ಪ್ರಾಣ ಕಳೆದುಕೊಂಡ ಮಗಳು. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ.
ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತಂತೆ ಹೆಚ್ಚಿನ ವಿವರಗಳು ಖಚಿತವಾಗಿ ಇನ್ನಷ್ಟೇ ತಿಳಿದು ಬರಬೇಕಿದೆ.
ಶಾಸಕ ಜಮೀರ್​ ಅಹಮದ್​ರಿಂದ ಎಂಜಲು ಸೇವನೆ; ತಿನ್ನಲು ಕಾರಣವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
