ಬೆಂಗಳೂರು:ಒಂದೇ ದಿನ ತಾಯಿ ಮಗ ಇಬ್ಬರೂ ಸಾವಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಮಗ ಆಸ್ಪತ್ರೆಯಲ್ಲಿ ಸಾವಪ್ಪಿದ ವಿಷಯ ಕೇಳಿ ಹೊರ ಬಂದ ತಾಯಿ, ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಸಾವಪ್ಪಿದ್ದಾರೆ.
20 ವರ್ಷದ ಮೋಹನ್ ಗೌಡ ಬೈಕ್ ವಿಚಾರಕ್ಕೆ ಸ್ನೇಹಿತರ ಜೊತೆ ಜಗಳ ಮಾಡಿಕೊಂಡಿದ್ದ. ಬಳಿಕ ವಿಜಯನಗರದ ಮಾರನೇಹಳ್ಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ. ಆತನನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಪ್ಪಿದ್ದ. ಮಗನ ಸಾವಿನ ಸುದ್ದಿ ಕೇಳಿದ ತಾಯಿ ಲೀಲಾವತಿ ಆಸ್ಪತ್ರೆಯಿಂದ ಹೊರಬಂದರು. ಈ ವೇಳೆ ರಸ್ತೆಯಲ್ಲಿ ಕಾರು ಡಿಕ್ಕಿಯಾಗಿ ಸಾವಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪತ್ನಿಯನ್ನು ಕಳಿಸಿಲ್ಲ ಎಂದು ಮಾವನ ಕತ್ತನ್ನೇ ಬ್ಲೇಡ್‌ನಿಂದ ಸೀಳಿದ ಧಾರವಾಡದ ಅಳಿಯ!
ವಿಜಯನಗರದ ಮಾರೇನಹಳ್ಳಿಯಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಆತ್ಮಹತ್ಯೆ ಸಂಬಂಧವಾಗಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ತಾಯಿ ಲೀಲಾವತಿ ಅಪಘಾತದ ಪ್ರಕರಣವು ವಿಜಯನಗರ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.
ಸೆ.5 ರ ಎನ್​ಡಿಎ ಪರೀಕ್ಷೆಗೆ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ: ಸುಪ್ರೀಂ ಕೋರ್ಟ್​ ಆದೇಶ

ಸ್ಥಳೀಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ: ಹೆದ್ದಾರಿ ಕಾಮಗಾರಿ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಅಸಮಾಧಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
