ಬೀದರ್​:ಬಟ್ಟೆ ಒಗೆಯಲೆಂದು ಹೋದವರು ಮರಳಿ ಬರದ ದುರಂತವೊಂದು ಸಂಭವಿಸಿದೆ. ತಾಯಂದಿರ ಜತೆಗೆ ಮಕ್ಕಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಇಂಥದ್ದೊಂದು ಕರುಣಾಜನಕ ಪ್ರಕರಣ ನಡೆದಿದೆ.
ಬೀದರ್​ನ ಕಂಗಟ್ಟಿ ಗ್ರಾಮದಲ್ಲಿ ಇಂದು ಈ ದುರಂತ ಸಂಭವಿಸಿದೆ. ತಾಯಿ ಆನಂದಾ (37), ಈಕೆಯ ಪುತ್ರ ಪ್ರಜ್ವಲ (10), ಇನ್ನೊಬ್ಬ ತಾಯಿ ಸುನೀತಾ (36), ಈಕೆಯ ಪುತ್ರ ನಾಗ ಶೆಟ್ಟಿ (08) ನೀರುಪಾಲಾಗಿದ್ದಾರೆ. ಈ ಮೂಲಕ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ದಸರಾ ಹಬ್ಬದ ಸಲುವಾಗಿ ಇವರು ಇಂದು ಬಟ್ಟೆ ಒಗೆಯಲು ಗ್ರಾಮದ ಹೊರವಲಯದಲ್ಲಿದ್ದ ಹಳ್ಳಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ನಾಲ್ವರೂ ನೀರುಪಾಲಾಗಿದ್ದು, ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 24 ಗಂಟೆಯಲ್ಲಿ ಎರಡು ‌ಕುಟುಂಬದ 6 ಜನ‌ರು ಸಾವಿಗೀಡಾಗಿದ್ದಾರೆ.
ಶ್ರೀಧರ ಎಂಬ ಯುವಕ ಮೊಹ್ಮದ್ ಸಲ್ಮಾನ್ ಆದ ಕಥೆ-ವ್ಯಥೆ; ಬಲವಂತದ ಖತ್ನಾ, ಮತಾಂತರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
