ಬೆಂಗಳೂರು:ರಾಜ್ಯದಲ್ಲಿ ಕೈಗಾರಿಕಾ ಯಂತ್ರೋಪಕರಣ ತಯಾರಿಕೆ ಹಾಗೂ ಬ್ಯಾಟರಿಕೋಶಗಳ ಮರುಬಳಕೆ ಸಂಗ್ರಹಣಾ ಕೇಂದ್ರ ಸ್ಥಾಪಿಸಲು ಒಟ್ಟು 1,040 ಕೋಟಿ ರೂ. ಬಂಡವಾಳ ಹೂಡಿಕೆಯ ಎರಡು ಒಪ್ಪಂದಗಳಿಗೆ ವಿದೇಶದಲ್ಲಿ ಸಹಿ ಹಾಕಲಾಗಿದೆ.
ಮುಂದಿನ ವರ್ಷದ ೆಬ್ರವರಿಯಲ್ಲಿ ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನಿಸಲು ವಿದೇಶಕ್ಕೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ನೇತೃತ್ವದ ನಿಯೋಗ ದಕ್ಷಿಣ ಕೊರಿಯಾ ಪ್ರವಾಸದಲ್ಲಿದೆ.
ದಕ್ಷಿಣ ಕೊರಿಯಾ ರಾಜಧಾನಿ ಸೋಲ್‌ನಲ್ಲಿ ಮಂಗಳವಾರ ರೋಡ್ ಷೋ ನಡೆಯಿತು. 45ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿದ್ದವು. ಕರ್ನಾಟಕದ ಕೈಗಾರಿಕೆ ಅಭಿವೃದ್ಧಿಗೆ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರು ಕೈಜೋಡಿಸಿದರು.
ರಾಜ್ಯದ ಜತೆಗೆ ಒಪ್ಪಂದ
ಮಷಿನ್‌ಟೂಲ್ಸ್ ಮತ್ತು ಕೈಗಾರಿಕಾ ಯಂತ್ರೋಪಕರಣ ತಯಾರಿಸುವ ಡಿಎನ್ ಸೊಲುಷನ್ಸ್ ಕಂಪನಿಯು ಒಂದು ಸಾವಿರ ಕೋಟಿ ರೂ. ಹೂಡಿಕೆಗೆ ರಾಜ್ಯ ಸರ್ಕಾರದ ಜತೆ ಒಡಂಬಡಿಕೆ ಮಾಡಿಕೊಂಡಿದೆ. ಬೆಂಗಳೂರು ಬಳಿಯ ಮಾಹಿತಿ ತಂತ್ರಜ್ಞಾನ ಪ್ರದೇಶದಲ್ಲಿ ಈ ಕಂಪನಿ ತಯಾರಿಕಾ ಘಟಕ ಸ್ಥಾಪಿಸಲಿದೆ.
ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಬಿಡಿಭಾಗಗಳನ್ನು ತಯಾರಿಸುವ ಇಎಂಎನ್‌ಐ ಕಂಪನಿಯು ಬ್ಯಾಟರಿಕೋಶಗಳ ದಾಸ್ತಾನು ಹಾಗೂ ಬ್ಯಾಟರಿ ಕೋಶಗಳ ಮರುಬಳಕೆ ಸಂಗ್ರಹಣಾ ಕೇಂದ್ರವನ್ನು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದ ಜತೆಗೆ ಒಪ್ಪಂದಕ್ಕೆ ಸಹಿ ಹಾಕಿತು.
ಇದಕ್ಕೂ ಮುನ್ನ ರೋಡ್ ಷೋ ಉದ್ದೇಶಿಸಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ ವಿದ್ಯುತ್ ಚಾಲಿತ ವಾಹನಗಳ ಭವಿಷ್ಯ, ಅತ್ಯಾಧುನಿಕ ಯಂತ್ರೋಪಕರಣ, ಬಾಹ್ಯಾಕಾಶ ತಂತ್ರಜ್ಞಾನ ಸೇರಿ ವಿವಿಧ ಉದ್ದಿಮೆ ವಲಯಗಳಲ್ಲಿ ರಾಜ್ಯದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರದ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹವೆಂದು ಎಂ.ಬಿ.ಪಾಟೀಲ ಸಂತಸ ವ್ಯಕ್ತಪಡಿಸಿದರು.
ದಕ್ಷಿಣ ಕೊರಿಯಾದ ಸೋಲ್‌ನಲ್ಲಿ ಡಿಎನ್ ಸೊಲ್ಯುಷನ್ಸ್ ಕಂಪನಿಯ ಅಧ್ಯಕ್ಷ ಸಂಘುನ್ ಕಿಮ್ ಜತೆಗೆ ಸಚಿವ ಎಂ.ಬಿ.ಪಾಟೀಲ ಒಪ್ಪಂದ ದಾಖಲೆಗಳನ್ನು ವಿನಿಮಯ ಮಾಡಿಕೊಂಡರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
