
ಬೆಂಗಳೂರು:ಬಿಜೆಪಿ ಜೊತೆಗೆ ದೋಸ್ತಿಯಾಗಿರುವ ಜೆಡಿಎಸ್‌ಗೆ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರವನ್ನು ಬಿಟ್ಟುಕೊಡಬೇಕು ಎನ್ನುವ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ರಾಜ್ಯಸಭೆ ಸದಸ್ಯ ಸ್ಥಾನದ ವಿಚಾರವೂ ಮುನ್ನೆಲೆಗೆ ಬಂದಿದೆ.ಕಳೆದ ಮೂರ‌್ನಾಲ್ಕು ಚುನಾವಣೆಯಲ್ಲಿ ಮತಗಳಿಕೆ ಆಧಾರ ಇಟ್ಟುಕೊಂಡು ಜೆಡಿಎಸ್ ಪ್ರಾಬಲ್ಯ ಇರುವ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್‌ಗೆ ನೀಡಲಾಗಿದೆ. ಇದರ ಆಧಾರದ ಮೇಲೆ ಕನಿಷ್ಠ 6 ಕ್ಷೇತ್ರಗಳನ್ನು ನೀಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟಿದೆ.ಆದರೆ, ರಾಜ್ಯ ಬಿಜೆಪಿ ಮುಖಂಡರ ಅಭಿಪ್ರಾಯ ತದ್ವಿರುದ್ದವಾಗಿದೆ. ಐದಾರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ, ಈಗಿನ ರಾಜಕೀಯ ಸ್ಥಿತಿಯಲ್ಲಿ ಏನೂ ಪ್ರಯೋಜನವಾಗುವುದಿಲ್ಲ ಜೆಡಿಎಸ್‌ಗೆ ಅಷ್ಟೆ ಅಲ್ಲ, ಬಿಜೆಪಿಗೂ ನಷ್ಟವಾಗಲಿದೆ ಎನ್ನುವುದು ಸ್ಥಳೀಯ ಬಿಜೆಪಿ ಮುಖಂಡರ ಒಮ್ಮತಾಭಿಪ್ರಾಯವಾಗಿದೆ.ಜೆಡಿಎಸ್‌ಗೆ ಹಾಸನ ಮತ್ತು ಮಂಡ್ಯ ಎರಡು ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಟ್ಟು, ಇನ್ನುಳಿದ ಕ್ಷೇತ್ರಗಳನ್ನು ಬಿಜೆಪಿಯೇ ಉಳಿಸಿಕೊಂಡು ಸ್ಪರ್ಧೆ ಮಾಡುವುದು ಪಕ್ಷಕ್ಕೆ ಹೆಚ್ಚು ಲಾಭದಾಯಕವಾಗಲಿದೆ ಎನ್ನುವುದು ಮುಖಂಡರ ವಿಶ್ಲೇಷಣೆಯಾಗಿದೆ.ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಈಗಿನ ಸಂಖ್ಯಾ ಬಲದ ಆಧಾರದ ಮೇಲೆ ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲುವುದಕ್ಕೆ ಆಗುವುದಿಲ್ಲ. ಆದ್ದರಿಂದ ಅವರ ಬೆಂಬಲವನ್ನು ಬಿಜೆಪಿಗೆ ಪಡೆದು, ಅವರಿಗೆ ಒಂದು ರಾಜ್ಯಸಭಾ ಸ್ಥಾನ ಬಿಟ್ಟುಕೊಡುವುದು ಸೂಕ್ತ ಎನ್ನುವ ಮಾತುಕತೆಗಳು ರಾಜ್ಯ ಮುಖಂಡರುಗಳ ನಡುವೆ ನಡೆಯುತ್ತಿದೆ. ಈ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೂ ಕಳುಹಿಸಿಕೊಡಲಾಗುವುದು ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.ಜೆಡಿಎಸ್ ಕೂಡ ಈ ಸಲಹೆಗೆ ಒಪ್ಪಿಕೊಂಡರೆ ಅವರಿಗೂ ಅನುಕೂಲವಾಗಲಿದೆ. ಬಿಜೆಪಿ ಕೂಡ ರಾಜ್ಯದ 28 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಳ್ಳಲು ಅನುಕೂಲವಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ. ರಾಜ್ಯ ಮುಖಂಡರ ಸಲಹೆಗೆ ದೆಹಲಿ ಹೈಕಮಾಂಡ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೊ ಮುಂದೆ ಕಾದು ನೋಡಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
