ಶಿವಮೊಗ್ಗ:ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಳಿ ಈ ಬಗ್ಗೆ ಭಾನುವಾರವೇ ಚರ್ಚೆ ನಡೆಸಿದ್ದೆ. ದೇವೇಗೌಡರೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದರು.
ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಮುಜುಗರ ತರುವಂಥದ್ದಲ್ಲ, ಇಡೀ ಸಮಾಜಕ್ಕೆ ಮುಜುಗರ ತರುವಂಥದ್ದಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿದೆ. ತನಿಖಾ ವರದಿ ಬಂದ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದರು.
ನಮ್ಮ ಕುಟುಂಬ ಮತ್ತು ಎಚ್.ಡಿ.ರೇವಣ್ಣ ಕುಟುಂಬದವರು ಬೇರೆ ಬೇರೆ ಇದ್ದೇವೆ. ಇನ್ನು ಪ್ರಜ್ವಲ್ ಪ್ರಕರಣದಲ್ಲಿ ದೇವೇಗೌಡರು ಮತ್ತು ನನ್ನ ಕುಟುಂಬವನ್ನು ಎಳೆದು ತರಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು. ಜತೆಗೆ ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಎಲ್ಲವೂ ತನಿಖೆಯಾಗಬೇಕು. ಅದರಲ್ಲಿ ನಾನಾಗಲಿ, ದೇವೇಗೌಡರಾಗಲಿ ಯಾವುದೇ ರೀತಿ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಇಂತಹ ಕೃತ್ಯಗಳು ನಡೆಯಬಾರದು ಎಂದರು.
ನಾನು ಸಿಎಂ ಆಗಿದ್ದಾಗ ಮತ್ತು ದೇವೇಗೌಡರು ಪ್ರಧಾನಿ ಆಗಿದ್ದಾಗಲೂ ಸಾವಿರಾರು ಹೆಣ್ಣುಮಕ್ಕಳು ಕಷ್ಟ, ಸಮಸ್ಯೆಗಳಿಗಾಗಿ ಬಂದಿದ್ದಾರೆ. ಅವರನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ. ಪೆನ್‌ಡ್ರೈವ್ ಪ್ರಕರಣದಿಂದ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯಬೇಕು. ಇದರಲ್ಲಿ ರಾಜಕೀಯ ಸಂಚು ಇರುವುದೂ ಬಯಲಾಗಲಿದೆ ಎಂದು ತಿಳಿಸಿದರು.
ಅತ್ಯಾಧುನಿಕ ಪತ್ನಿಗಾಗಿ 19 ಲಕ್ಷ ಖರ್ಚು ಮಾಡುತ್ತಿರುವ ಯುವಕ! ಕಾರಣ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಚಿತ

ಹಣ ದುರ್ಬಳಕೆ ತನಿಖೆ ಯಾರು ನಡೆಸಬೇಕು? ಮೇ 30ಕ್ಕೆ ವಿಚಾರಣೆ ನಿಗದಿಪಡಿಸಿದ ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
