ಬೆಂಗಳೂರು:ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ​ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಅಂದರೆ ಆರು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಎಸ್ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಅರೆಸ್ಟ್! ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧನ
ನಿನ್ನೆ ಮಧ್ಯರಾತ್ರಿ 12.51ರ ಸಮಯದಲ್ಲಿ ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿದ್ದು, ಇಂದು(ಮೇ 31) ಅವರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ಅಗತ್ಯವಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.
ಎಸ್​ಐಟಿ ಮನವಿ ಪುರಸ್ಕರಿಸಿದ ಕೋರ್ಟ್​, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್​ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಎಸ್​ಐಟಿ ಪರವಾಗಿ ಎಸ್‌ಪಿಪಿ ಅಶೋಕ್ ನಾಯಕ್‌ ಅವರು ವಾದ ಮಂಡಿಸಿದರೆ, ಪ್ರಜ್ವಲ್​ ಪರ ಅರುಣ್​ ವಾದ ಮಂಡಿಸಿದರು.
ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು.
ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು.  ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ 6  ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
