ಚಿಕ್ಕಬಳ್ಳಾಪುರ:ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ನಾನು ಎಲ್ಲೆ ಇದ್ದರೂ ಬಂದು ಎಸ್‌ಐಟಿ ಮುಂದೆ ಹಾಜರಾಗುವ ಮೂಲಕ ತನಿಖೆಗೆ ಸಹಕಾರ ಕೊಡುವಂತೆ ಕೇಳಿಕೊಂಡಿದ್ದೆವು. ಈ ಬಗ್ಗೆ ದೇವೇಗೌಡರು ಎಚ್ಚರಿಕೆ ಕೊಟ್ಟರೆ ನಾನು ಮನವಿ ಮಾಡಿಕೊಂಡಿದ್ದೆ. ಅಲ್ಲದೇ ಇದೇ ವೇಳೆ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದರೆ ಕೂಡಲೇ ಬರಬೇಕು ಎಂದು ಹೇಳಿದ್ದೆವು. ಇದೀಗ ನಮ್ಮ ಮನವಿಗೆ ಓಗೊಟ್ಟು ಬರುತ್ತಿರುವುದು ಇವತ್ತು ನಮಗೂ ಸ್ವಲ್ಪ ಸಮಾಧಾನ ತಂದಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ವಿಡಿಯೋಗಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ಇದೆ. ಷಡ್ಯಂತರ ನಡೆಸಿರುವುದು ಕಾಂಗ್ರೆಸ್ ಎನ್ನುವುದು ಇಡೀ ಜಗತ್ತಿಗೆ ಗೊತ್ತು. ಕಾನೂನಿನ ಮುಂದೆ ಎಲ್ಲರೂ ಸಮಾನರು, ಯಾರು ದೊಡ್ಡವರಿಲ್ಲ ಎಲ್ಲರೂ ಕಾನೂನಿಗೆ ತಲೆ ಬಾಗಲೇಬೇಕು. ಮುಂದಿನ ದಿನಗಳಲ್ಲಿ ಏನೇನೋ ನಡೆಯುತ್ತದೆ ನೋಡೋಣ. ಈಗಲೇ‌ ಪ್ರಕರಣದ ಬಗ್ಗೆ ಏನು ಹೇಳುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನಡೆಯಬಾರದೆಲ್ಲ ನಡೆಯುತ್ತಿದೆ. ಜನರ ನಿರೀಕ್ಷೆಗೆ ಅನುಗುಣವಾಗಿ, ಅಭಿವೃದ್ಧಿ ಕೆಲಸಗಳು ಸೊರಗಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಯಾವಾಗ ರಾಜಕೀಯ ಪಿತೂರಿ ನಡೆಯಿತೋ, ಆಗ ನಾನು ಡಿಪ್ರೆಶನ್​ಗೆ ಹೋಗಿದ್ದೆ : ಪ್ರಜ್ವಲ್ ರೇವಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
