ಬೆಂಗಳೂರು:ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್​ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣ ಕ್ಷೇತ್ರಕ್ಕೆ ಬರಬಾರದಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಾ ಎಂದು ಟ್ವಿಟರ್​ನಲ್ಲಿ ಟಾಂಗ್ ನೀಡಿದ್ದಾರೆ.
ಇದನ್ನೂ ಓದಿ:ಕದನ ಕಣದಲ್ಲಿ ತೊಡೆತಟ್ಟಿದ ಕೋಟಿವೀರರು; ಇಲ್ಲಿದೆ ಶತಕೋಟ್ಯಧೀಶ ರಾಜಕಾರಣಿಗಳ ಒಟ್ಟು ಆಸ್ತಿ ವಿವರ…
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?https://t.co/e7DP2HFTNR— Pratap Simha (@mepratap)April 18, 2023
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ?https://t.co/e7DP2HFTNR
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ:VIDEO | ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ವಿನಂತಿಸಿದ ಪೊಲೀಸ್; ಅಧಿಕಾರಿಯ ಕಾರ್ಯಕ್ಕೆ ಸಿಎಂ ಶ್ಲಾಘನೆ
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
