ಮೈಸೂರು:ಶಿವ ಬೆಟ್ಟವನ್ನು ಏಸು ಬೆಟ್ಟವಾಗಿ ಪರಿವರ್ತನೆ ಮಾಡಿದ ಡಿ.ಕೆ ಶಿವಕುಮಾರ್, ಹನುಮಂತನ ಜನ್ಮ ದಿನವನ್ನು ಪ್ರಶ್ನೆ ಮಾಡಿದ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಭಜರಂಗಿ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರ ನವರಂಗಿ ಆಟ ಗೊತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರವಾಗಿ ಪ್ರತಾಪ್ ಸಿಂಹ ಮಾತನಾಡುತ್ತಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಾಮಾ ಬಿನ್ ಲ್ಯಾಡೆನ್ ಮತ್ತು ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರಕಾರ ರಚನೆ ಆಗುತ್ತದೆ. ಘಜ್ನಿ ಮಹಮದ್, ಟಿಪ್ಪು ಸುಲ್ತಾನ್​ನನ್ನು ವೈಭವೀಕರಿಸುವ ಪಠ್ಯ ಬರುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ವೆಸ್ಟೆಂಡ್ ಹೋಟೆಲ್​​ನಲ್ಲಿ ಇದ್ಕೊಂಡು ಬೆಳಗ್ಗೆಯಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡ್ತಿದ್ದೆ: ಎಚ್​ಡಿಕೆ
ಸೀತೆ ಹುಡುಕಿ ಕೊಂಡು ಹೋದ ಭಜರಂಗಿ ರಾಮನಿಗಾಗಿ ಪರ್ವತವನ್ನೇ ಎತ್ತಿಕೊಂಡು ಬಂದ. ಕರ್ನಾಟಕದ ಭಜರಂಗಿಗಳು ಹಿಂದೂತ್ವಕ್ಕಾಗಿ, ಗೋ ಮಾತೆಗಾಗಿ ಅದೇ ಪರ್ವತದಡಿ ಕಾಂಗ್ರೆಸ್​ನನ್ನು ಹೊಸಕಿ ಹಾಕುತ್ತಾರೆ. ಎಚ್ಚರಿಕೆಯಿಂದ ಮಾತನಾಡಿ. ರಾಮ, ಹನುಮಂತನ ಮೇಲೆ ಕಾಂಗ್ರೆಸಿಗರಿಗೆ ಯಾಕೆ ಇಷ್ಟು ಕೋಪ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.
ರಾಮ, ಹನುಮಂತ ಈ ದೇಶದ ಅಸ್ಮಿತೆಯ ಪ್ರತೀಕ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕನ್ನಡಿಗರ ಸರಕಾರ ರಚನೆ ಆಗುವುದಿಲ್ಲ. ಬದಲಾಗಿ ತಾಲಿಬಾನ್ ಸರಕಾರ ರಚನೆ ಆಗುತ್ತದೆ. ಅಕ್ರಮವಾಗಿ ಮುಸ್ಲಿಮರಿಗೆ ಕರ್ನಾಟಕದಲ್ಲಿ ಮೀಸಲಾತಿ ಕೊಡಲಾಗುತ್ತಿತ್ತು.‌ ಅದನ್ನು ನಾವು ತೆಗೆದಿದ್ದೇವೆ. ಕಾಂಗ್ರೆಸಿಗರು ಐತಿಹಾಸಿಕ ಅನ್ಯಾಯ ಮಾಡಿದ್ದರು. ನಾವು ನ್ಯಾಯ ನೀಡಿದ್ದೇವೆ ಎಂದರು.
ಇದನ್ನೂ ಓದಿ:ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧನಂಜಯ ಪ್ರಚಾರ
ಬಜರಂಗದಳದವರು ಯಾವ ಅಪಹರಣ ಮಾಡಿದ್ದಾರೆ? ಯಾರನ್ನು ಕೊಲೆ ಮಾಡಿದ್ದಾರೆ? ಅಶಾಂತಿ ಕದಡುವು ಕೆಲಸ ಏನು ಮಾಡಿದ್ದಾರೆ? ಪಿಎಫ್ಐ, ಎಸ್​ಡಿಪಿಐ ಸಂಘಟನೆ ಮೇಲೆ ನೂರಾರು ಕ್ರಿಮಿನಲ್ ಕೇಸ್ ಇವೆ. ಅವರಿಗೂ ಇವರಿಗೂ ಹೇಗೆ ಹೋಲಿಕೆ ಮಾಡುತ್ತೀರಿ? ಭಜರಂಗದಳದವರು ಗೋಮಾತೆ ರಕ್ಷಣೆಗೆ, ಹಿಂದುತ್ವದ ರಕ್ಷಣೆಗೆ, ಕರ್ನಾಟಕದ ಹಿತ ರಕ್ಷಣೆಗೆ ಹೋರಾಟ ಮಾಡಿದ್ದಾರೆ. ತಾಲಿಬಾನ್ ಸರಕಾರ ಬಂದರೆ ಹಿಂದು ಸಂಘಟನೆಗಳಿಗೆ ಮಾತ್ರವಲ್ಲ, ಹಿಂದುಗಳಿಗೆ, ಹಿಂದುತ್ವಕ್ಕೆ ಉಳಿಗಾಲ ಇರುವುದಿಲ್ಲ. ರಾಮನ ಆದರ್ಶ ಪಾಲಿಸುವ ಯಾರಿಗೂ ಉಳಿಗಾಲವಿಲ್ಲ ಎಂದು ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
