ಮೈಸೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರು ಎದುರಾಳಿಯಾದರೆ ನಮಗೆ ಒಳ್ಳೆಯದು. ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ–ಪತ್ರಕರ್ತನ ನಡುವೆ ಫೈಟ್ ಇರುತ್ತದೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಂಸದ ಪ್ರತಾಪ್​ ಸಿಂಹ, ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದಿದ್ದಾರೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ. ನಾನು ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ಧಾರೆ.
ಇದನ್ನೂ ಓದಿ:ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ; ಎಂಟು ಮಂದಿ ಸಾವು, ಹಲವರು ನಾಪತ್ತೆ
ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್​ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಟೀಕಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಯೋಧ್ಯೆಗೆ ಉದ್ಘಾಟನೆ ನಂತರ ಹೋಗುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದು ಸಂಸದ ಪ್ರತಾಪ್​ ಸಿಂಹ ಲೇವಡಿಯಾಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
