ದಾವಣಗೆರೆ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌ ಇದೆ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಹಿಜಾಬ್​ ನಿಷೇಧ ವಾಪಸ್​ ಪಡೆದಿರುವ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಖಂಡಿಸಿರುವ ಎಂ.ಪಿ. ರೇಣುಕಾಚಾರ್ಯ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ಕೊಡುತ್ತೇವೆಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡದ ಕಾಂಗ್ರೆಸ್ ಪಿಎಂ ಮಾಡ್ತಾರಾ?: ಕೆ.ಎಸ್. ಈಶ್ವರಪ್ಪ
ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು. ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ಕೊಡುತ್ತೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟ, ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ‌ ಇದೆ. ಎಲ್‌ಕೆಜಿಯಿಂದ ಕಾಲೇಜಿನವರೆಗೂ‌ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, 2021ರಲ್ಲಿ ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಅನ್ನು ಮುನ್ನೆಲೆಗೆ ತಂದಿದ್ದರು. ಅಂದು ರಾಜ್ಯದಲ್ಲಿ ದೊಡ್ಡ ಘಟನೆಯೇ ನಡೆದು ಹೋಯಿತು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಮರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
