ದಾವಣಗೆರೆ:ಬಿಜೆಪಿ ಮಾಜಿ ಶಾಸಕ ಸಿ.ಟಿ. ರವಿ ನೀಡಿದ್ದ ‘ನಾಟ್ ರೀಚಬಲ್’ ಹೇಳಿಕೆಗೆ ಇದೀಗ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿರುಗೇಟು ನೀಡಿದ್ದು, ಸಣ್ಣ ಮಗು ನಾನಲ್ಲ, ಲಾಲಿಪಾಪ್ ತಿನ್ನುತ್ತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕರಾವಳಿ ಸಂಸ್ಕೃತಿ ಪ್ರತಿಬಿಂಬಿಸುವ ಮ್ಯೂಸಿಯಂ -ಸ್ಪೀಕರ್ ಯು.ಟಿ. ಖಾದರ್ ಆಶಯ
ದಾವಣಗೆರೆಯಲ್ಲಿ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, “ನಿನ್ನೆ ಮೊನ್ನೆ ಬಂದವರ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಬಕೆಟ್ ಹಿಡಿಯುವ ರಾಜಕಾರಣ ಮಾಡುವುದಿಲ್ಲ. ನನ್ನ ಮೇಲೆ ಬೆದರಿಕೆ ಕರೆ ಬಂದಾಗ ಯಾರು ಮಾತನಾಡಿಲ್ಲ, ಈಗ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ಜನರ ಅಪೇಕ್ಷೆಯಾಗಿದೆ” ಎಂದು ಹೇಳಿದರು.
“ಕಾಲೈ ತಸ್ಮೈ ನಮಃ ಮುಂದೆ ಏನಾಗಲಿದೆ ಕಾದು ನೋಡೋಣ. ಈಗಲೂ ನಾನು ಬಿಜೆಪಿಯ ಕಟ್ಟಾಳು, ಕಾಂಗ್ರೆಸ್​ಗೆ ಹೋಗುವ ನಿರ್ಧಾರ ಕೈಗೊಂಡಿಲ್ಲ. ಯಾರು ನಾಟ್ ರೀಚಬಲ್ ಎಂಬುದು ಎಲ್ಲರಿಗೂ ತಿಳಿದಿದೆ. ಸಣ್ಣ ಮಗು ನಾನಲ್ಲ, ಲಾಲಿಪಪ್ ತಿನ್ನುತ್ತಿಲ್ಲ. ಯಾರಿಂದಲೂ ಹೇಳಿಸಿಕೊಳ್ಳುವ ಅವಶ್ಯಕತೆ ನನಗಿಲ್ಲ” ಎಂದು ಹೇಳುವ ಮುಖೇನ ಸಿಟಿ ರವಿ ಹೇಳಿಕೆ ತಿರುಗೇಟು ನೀಡಿದ್ದಾರೆ.

ನಟ ರವಿತೇಜ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
