ಹಾವೇರಿ:ಹಾವೇರಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆ ಆಯೋಜಿಸಲಾಗಿತ್ತು. ಅಲ್ಲಿಗೆ ಅಧಿಕಾರಿಗಳು ಅಪೂರ್ಣ ಮಾಹಿತಿ ತಂದಿದ್ದರು. ಇದರಿಂದ ಸಿಟ್ಟಾದ ಸಂಸದರೊಬ್ಬರು ಅಧಿಕಾರಿಗಳನ್ನು ಏಕ ವಚನದಲ್ಲಿ ಗದರಿ ಸಭೆಯಿಂದ ಹೊರಗೆ ಕಳಿಸಿದ್ದಾರೆ.
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಿತು. ಅಲ್ಲಿ ಪಿಎಂಜಿಎಸ್​ವೈ ಯೋಜನೆಯಲ್ಲಿ ಆದ ಗೊಂದಲದ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಮನೆಗಳಿಗೆ ಮಂಜೂರಾಗಬೇಕಾದ ಸಂಖ್ಯೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ಮಂಜೂರು ಮಾಡಲಾಗಿತ್ತು. ಈ ಮನೆಗಳ ನಿರ್ಮಾಣ ವಿವರ ನೀಡುವಾಗ ಅಧಿಕಾರಿಗಳು ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಸಂದರ್ಭ ಒಬ್ಬ ಅಧಿಕಾರಿಯೂ ಒಂದೊಂದು ಅಂಕಿ ಅಂಶ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಂಸದ ಶಿವಕುಮಾರ್​ ಉದಾಸಿ ಅಧಿಕಾರಿಗಳನ್ನು ಏಕವಚನದಲ್ಲೇ ಬೈದು ಹೊರ ಕಳಿಸಿದ್ದಾರೆ.
ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಸಿಡಿ ಗೀತಾ ಸೇರಿದಂತೆ ಪೌರಾಯುಕ್ತರನ್ನು ಹೊರಗೆ ಕಳಿಸಿದ ಸಂಸದ ಶಿವಕುಮಾರ್ ಉದಾಸಿ ಸಂಪೂರ್ಣ ಮಾಹಿತಿಯೊಂದಿಗೇನೇ ಸಭೆಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ. ಒಟ್ಟಿನಲ್ಲಿ ಅಪೂರ್ಣ ಮಾಹಿತಿಯೊಂದಿಗೆ ಬಂದಿದ್ದ ಅಧಿಕಾರಿಗಳ ಮೇಲೆ ಸಂಸದ ಶಿವಕುಮಾರ್ ಉದಾಸಿ ಗರಂ ಆಗಿದ್ದಾರೆ. ಇದರಿಂದ ತಬ್ಬಿಬ್ಬಾಗಿ ಮುಜುಗರಕ್ಕೆ ಈಡಾದ ಅಭಿಕಾರಿಗಳುಕ ಸಭೆಯಿಂದ ಎದ್ದು ಹೋಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − one =
Remember me
