ಮಂಡ್ಯ:ಮತದಾರರ ಸೇವೆ ಮಾಡುವ ಮೂಲಕ ಚುನಾವಣೆಯಲ್ಲಿ ಬೆಂಬಲಿಸಿದ ಜನರ ಋಣ ತೀರಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದರು.ಸುಮಲತಾ ಅಂಬರೀಶ್ ಗೆಲುವು ಸಾಧಿಸಿದರೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದ ಹುಲಿ ದುರ್ಗದ ಅಜ್ಜಮ್ಮ ದೇವಿ ದೇವಸ್ಥಾನಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಅಂಬರೀಷ್ ಅಭಿಮಾನಿ ಸುಬ್ಬಣ್ಣ ಹರಕೆ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿ ಮಾತನಾಡಿದರು. ಭಕ್ತಿ ಇರುವ ಕಡೆ ದೇವರು, ಪ್ರೀತಿ ಇರುವ ಜನರೆಡೆಗೆ ನಾಯಕರು ಬರದೇ ಇರಲು ಸಾಧ್ಯವಿಲ್ಲ. ಈ ಭಾಗದ ಜನತೆ ಶೇ.80ಕ್ಕಿಂತ ಹೆಚ್ಚಿನ ಮತ ನೀಡಿ ನನ್ನ ಗೆಲುವಿಗೆ ಕಾರಣರಾಗಿದ್ದೀರಿ, ಅಂಬರೀಷ್ ಅವರ ಕೆಲಸ ಕಾರ್ಯಗಳು ಜನರ ಮನಸ್ಸಿನಲ್ಲಿ ಉಳಿದಿದೆ. ಅವರ ಹಾದಿಯಲ್ಲೇ ನಡೆದು ಜನತೆಯ ಋಣ ತೀರಿಸುವ ಕೆಲಸ ಮಾಡುವೆ. ಜನರ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ಪ್ರೀತಿ ವಿಶ್ವಾಸವೇ ನನ್ನನ್ನು ಇಲ್ಲಿವರೆಗೆ ಕರೆತಂದಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
