ಬೆಂಗಳೂರು:ಕರೊನಾ ವಿರುದ್ಧ ಹೋರಾಡಬೇಕಾದ ರಾಜ್ಯದ ಸಂಸದರ ನಿರ್ಲಕ್ಷ್ಯ ಎದ್ದು ಕಾಣುತ್ತದೆ. ಕರೊನಾದಿಂದ ಜನ ಜೀವನವೇ ಅಲ್ಲೋಲ ಕಲ್ಲೋಲವಾದರೂ ಸಂಸದರಿಂದ ಯಾವುದೇ ಸ್ಪಂದನೆ ಕಾಣಿಸುತ್ತಿಲ್ಲ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಸೋಂಕಿತರಿಗೆ ಹಾಸಿಗೆ, ರೆಮ್​ಡೆಸಿವಿರ್​, ಆಕ್ಸಿಜನ್, ಲಸಿಕೆ ಸಮಸ್ಯೆ ಗಂಭೀರವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದರಾದ ಡಾ.ಉಮೇಶ್ ಜಾಧವ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಡಿ.ಕೆ.ಸುರೇಶ್ ಸೇರಿ ಕೆಲವೇ ಸಂಸದರು ಆಗೊಮ್ಮೆ- ಈಗೊಮ್ಮೆ ಧ್ವನಿ ಎತ್ತಿದ್ದು, ಸೀಮಿತ ವಲಯದಲ್ಲಿ ತಕ್ಕಮಟ್ಟಿಗೆ ಸ್ಪಂದಿಸಿದ್ದಾರೆ. ಉಳಿದವರು ಏನು ಮಾಡುತ್ತಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಸಂಘಟಿತ ಪ್ರಯತ್ನ ಇಲ್ಲ:ಬೇರೆ ರಾಜ್ಯಗಳ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಆಕ್ಸಿಜನ್, ರೆಮ್ೆಸಿವಿರ್ ಚುಚ್ಚುಮದ್ದು ಸೇರಿ ಮತ್ತಿತರ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದ ಮೇಲೆ ನಿರಂತರ ಒತ್ತಡ ಕೂಡ ತರುತ್ತಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಆಕ್ಸಿಜನ್ ಪೂರೈಸದೆ ಇದ್ದರೂ ದೊಡ್ಡ ದನಿ ಎತ್ತುವ ಪ್ರಯತ್ನ ನಡೆಯುತ್ತಿಲ್ಲ ಎಂಬುದು ಜನರ ಆಕ್ಷೇಪ. ಚಾಮರಾಜನಗರ ದುರಂತದ ಬಗ್ಗೆ ವಿ.ಶ್ರೀನಿವಾಸಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಸೋಂಕು ನಿಯಂತ್ರಣ, ಜನರಿಗೆ ಬೇಕಾದ ಸವಲತ್ತು ಕಲ್ಪಿಸುವಲ್ಲಿ ರಾಜ್ಯದ ಸಂಸದರಿಂದ ನಿರೀಕ್ಷಿತ ಪ್ರಯತ್ನ ಕಾಣುತ್ತಿಲ್ಲ. ನೀವೂ ಫೀಲ್ಡ್​ಗೆ ಇಳಿಯಿರಿ. ಜನರನ್ನು ಲಸಿಕಾ ಕೇಂದ್ರಕ್ಕೆ ಕರೆ ತನ್ನಿ. ಜನರಲ್ಲಿ 2ನೇ ಅಲೆ ಬಗೆಗಿನ ಆತಂಕ ಕುರಿತು ಜಾಗೃತಿ ಮೂಡಿಸಿ ಎಂದು ಸಂಸದರಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದರೂ ಈ ನಿಟ್ಟಿನಲ್ಲಿ ಯಾರೂ ಫೀಲ್ಡ್​ಗೆ ಇಳಿದ ಉದಾಹರಣೆ ಇಲ್ಲ.
ಚಾಮರಾಜನಗರ ಆಕ್ಸಿಜನ್ ದುರಂತ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಡಕ್ ಸೂಚನೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಮಂತ್ರಿಗಳು ಜಿಲ್ಲೆಯಲ್ಲಿ ಉಪಸ್ಥಿತರಿದ್ದು ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಕರೊನಾ ನಿರ್ವಹಣೆಗೆ ಬೇಕಾದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಹಲವು ಸಚಿವರು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಆದರೆ ಇನ್ನೂ ಕೆಲ ಸಚಿವರೂ ಉಸ್ತುವಾರಿ ಜಿಲ್ಲೆಗಳತ್ತ ತಲೆ ಹಾಕಿಲ್ಲ. ಆರೋಗ್ಯ ಖಾತೆ ಹೊಣೆ ಹೊತ್ತಿರುವ ಸಚಿವ ಡಾ. ಕೆ.ಸುಧಾಕರ್ ಉಸ್ತುವಾರಿ ಜಿಲ್ಲೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿಲ್ಲ. ಔಷಧ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿರುವ ಡಿಸಿಎಂ ಅಶ್ವತ್ಥ ನಾರಾಯಣ ರಾಮನಗರಕ್ಕೆ ಬಂದಿಲ್ಲ. ಬೆಡ್ ಸಮಸ್ಯೆ ನಿವಾರಣೆಗೆ ಮುಂದಾಗಿರುವ ಆರ್. ಅಶೋಕ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗ್ಗೆ ತಲೆಕೆಡಿಕೊಂಡಿಲ್ಲ. ಇದೇ ಜವಾಬ್ದಾರಿ ನಿರ್ವಹಣೆಯಲ್ಲಿರುವ ಬಸವರಾಜ ಬೊಮ್ಮಾಯಿ ಹಾವೇರಿ ಹಾಗೂ ಉಡುಪಿ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಜಗದೀಶ ಶೆಟ್ಟರ್ ಆಕ್ಸಿಜನ್ ಪೂರೈಕೆಯ ಉಸ್ತುವಾರಿ ಹೊತ್ತಿದ್ದು ಧಾರವಾಡಕ್ಕೆ ಬರುವ ಮಾಹಿತಿ ಇದೆ. ಇನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಏ.30 ರಂದು ಜಿಲ್ಲೆಗೆ ಆಗಮಿಸಿ ಶಾಸಕರು, ಅಧಿಕಾರಿಗಳ ಸಭೆ ನಡೆಸಿದ್ದು ಕೊನೆ. ಕೋಲಾರ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಕ್ವಾರಂಟೇನ್ ಆಗಿದ್ದೇನೆ. ಈ ಕಾರಣಕ್ಕೆ ಜಿಲ್ಲೆಗೆ ಭೇಟಿ ನೀಡಲಾಗಿಲ್ಲ. ಜಿಲ್ಲಾಡಳಿತದ ಜತೆ ಪೋನ್ ಮೂಲಕ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ. ಬೀದರ್ ಜಿಲ್ಲಾ ನೂತನ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಈ ಕಡೆ ಬಂದಿಲ್ಲ. ಉಳಿದಂತೆ ಆಯಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಕರೊನಾ ನಿರ್ವಹಣೆಯಲ್ಲಿ ಕೈಜೋಡಿಸಿದ್ದಾರೆ.
ಮದುವೆ ಆಗು ಎಂದು ಒತ್ತಾಯಿಸಿದ ಇಬ್ಬರಿಗೂ ಒಲ್ಲೆ ಎಂದಳು; ಎರಡು ಗುಂಡೇಟಿಗೆ ಹೆಣವಾಗಿ ಉರುಳಿದಳು..!

ಕೆಎಎಸ್ ಅಧಿಕಾರಿ ಚೇಂಬರ್‌ನ ವಾಷ್ ರೂಮ್​ನಲ್ಲಿ ದಂಪತಿಯ ಶವ ಪತ್ತೆ; ಭೀಕರವಾಗಿ ಕೊಲೆ ಮಾಡಿದ ಹಂತಕರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − thirteen =
Remember me
