ಬೆಂಗಳೂರು:ಬೆಳಗಾವಿ, ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದೆ ಎಂದು ಶಾಸಕ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ವಿಕಾಸಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರಾದ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಅಭ್ಯರ್ಥಿಗಳಾಗುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಜಿಲ್ಲೆ ನಾಯಕರು ಅಭಿಪ್ರಾಯ ಪಡೆದ ಮೇಲೆಯೇ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಎಲ್ಲರೂ ಸರ್ವಾನುಮತದಿಂದ ಅಭಿಪ್ರಾಯ ಕೊಟ್ಟಿದ್ದೇವೆ. ಅವರಿಬ್ಬರೂ ಗೆಲ್ಲುತ್ತಾರೆ ಎಂದರು.ಅಭ್ಯರ್ಥಿಗಳ ಬಗ್ಗೆ ಒಂದು ಸುತ್ತಿನ ಮಾತುಕತೆಯಾಗಿದೆ. ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದಾರೆ. ಅವರ ಅಭಿಪ್ರಾಯ ಮಂಡನೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಡಿ.ವಿ.ಸದಾನಂದಗೌಡರ ಅಸಮಾಧಾನ ಕುರಿತ ಪ್ರಶ್ನೆಗೆ, ನನ್ನ ಹುಟ್ಟುಹಬ್ಬ ಮುಗಿಯಲಿ. ಕುಟುಂಬದವರ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ. ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನೋಡಿ ಮುಂದಿನ ಹೆಜ್ಜೆ ಇಡುತ್ತೇವೆ. ನಾನು ಈವರೆಗೂ ಅವರನ್ನು ಸಂಪರ್ಕ ಮಾಡಿಲ್ಲ. ಅವರ ತೀರ್ಮಾನ ನೋಡಿಕೊಂಡು ಸಂಪರ್ಕ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
