ಬೆಂಗಳೂರು/ಧಾರವಾಡ:ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಈ ವರೆಗೆ ಸಂಸ್ಥೆಯ ಅಧ್ಯಕ್ಷರಾಗಿದ್ದರು.ಕರ್ನಾಟಕ ಟೇಬಲ್ ಟೆನಿಸ್​ ಸಂಸ್ಥೆಗೆ ಧಾರವಾಡದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಅಧಿಕಾರದ ಅವಧಿ 6 ವರ್ಷಗಳ ಕಾಲ ಇರುತ್ತದೆ. ಪ್ರಹ್ಲಾದ್ ಜೋಶಿಗೂ ಮುನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಈ ಕುರಿತು ಸಂತಸ ವ್ಯಕ್ತಪಡಿಸಿರುವ ರಕ್ಷಾ ರಾಮಯ್ಯ, ಕ್ರೀಡೆ ಯುವ ಸಮೂಹದ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದ್ದು, ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಪೂರಕವಾಗಿದೆ. ಟೇಬಲ್ ಟೆನಿಸ್​ ಅತ್ಯಂತ ಪ್ರಮುಖ ಕ್ರೀಡೆಯಾಗಿದ್ದು, ಇದರಿಂದ ದೇಹದ ಎಲ್ಲಾ ಅಂಗಾಂಗಳಿಗೂ ವ್ಯಾಯಾಮ ದೊರೆಯುತ್ತದೆ. ಏಕಾಗ್ರತೆಯ ಪ್ರತೀಕವಾಗಿರುವ ಟೇಬಲ್ ಟೆನಿಸ್​ ಕ್ರೀಡೆಯನ್ನು ರಾಜ್ಯದಲ್ಲಿ ಮತ್ತಷ್ಟು ಪ್ರಗತಿ ಪಥದತ್ತ ಕೊಂಡೊಯ್ಯಲು ಮತ್ತು ಪ್ರೋತ್ಸಾಹಿಸಲು ಶ್ರಮಿಸುವುದಾಗಿ ಹೇಳಿದರು.
ಗ್ಲಾಮರಸ್​ ಟೆನಿಸ್​ ತಾರೆ ಎಗುನಿ ಬೌಚಾರ್ಡ್​ ಈಗ ವೃತ್ತಿಪರ ಪಿಕಲ್​ಬಾಲ್​ ಆಟಗಾರ್ತಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two + four =
Remember me
