ಬೆಂಗಳೂರು ಗ್ರಾಮಾಂತರ:ಕೋವಿಡ್-19 ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಕಬ್ಬು ಬೆಳೆಗಾರರ ನೆರವಿಗೆ ಮುಂದಾಗಿರುವ ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ವಿಶ್ವವನ್ನೆ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಎರಡನೇ ಅಲೆಯಿಂದಾಗಿ ಇತರ ವಲಯಗಳಂತೆ ಕೃಷಿ ಚಟುವಟಿಕೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ ಅದರಲ್ಲೂ ಕಬ್ಬು ಬೆಳೆಗಾರರು ತೀವ್ರತರವಾದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಕಬ್ಬು ಬಿಲ್ ಬಾಕಿ ಉಳಿಸಿಕೊಳ್ಳುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ತಕ್ಷಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಹೊಸಕೋಟೆಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವರು ಕಾರ್ಖಾನೆಗಳು ಬಾಕಿ ಪಾವತಿಸಲು ವಿಫಲವಾದಲ್ಲಿ ಕಬ್ಬು (ನಿಯಂತ್ರಣ) ಕಾಯ್ದೆಯನ್ವಯ ವಸೂಲಾತಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ 2020-21 ನೇ ಸಾಲಿನ ಕಬ್ಬು ಅಗೆಯುವ ಹಂಗಾಮಿನಲ್ಲಿ 64 ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕಾರ್ಖಾನೆಗಳು 2021 ಏಪ್ರಿಲ್ ಸಾಲಿನಲ್ಲಿದ್ದಂತೆ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು, 42.94 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಿರುತ್ತವೆ. ಈ ಅವಧಿಗೆ ಕಾರ್ಖಾನೆಗಳು 13348.10 ಕೋಟಿ ರೂ.ನಷ್ಟು ಕಬ್ಬಿನ ಬಿಲ್ ಪಾವತಿಸಬೇಕಾಗಿದ್ದು, ಈ ಪೈಕಿ 12058.17 ಕೋಟಿ ರೂ.ನಷ್ಟು ಪಾವತಿಸಿರುತ್ತವೆ. 1324.49 ಕೋಟಿ ರೂ. ಬಾಕಿ ಮೊತ್ತ ಪಾವತಿಸಬೇಕಿದೆ.. ಅಂದರೆ ಪಾವತಿ ಪ್ರಮಾಣ ಶೇ 90 ರಷ್ಟು ಮತ್ತು ಬಾಕಿ ಪ್ರಮಾಣ ಶೇ 10 ರಷ್ಟಿರುತ್ತದೆ. ಪ್ರಸ್ತುತ ಕಬ್ಬು ಅರೆಯುವ ಹಂಗಾಮು ಬರುವ ಜೂನ್ ತಿಂಗಳವರೆಗೆ ಚಾಲನೆಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.
ನೋಟಿಸ್ ಜಾರಿ:ಬಿಲ್ ಪಾವತಿಸದ ಕಾರ್ಖಾನೆಗಳಿಗೆ ಈಗಾಗಲೇ ನೋಟೀಸ್‍ಗಳನ್ನು ಜಾರಿಗೊಳಿಸಲಾಗಿದೆ. ಜತೆಗೆ ಬಾಕಿ ವಸೂಲಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಕಾರ್ಖಾನೆಗಳು ಬಾಕಿ ಪಾವತಿಸದೆ ಇದ್ದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಹಳೆಯ ಬಾಕಿ 28.38 ಕೋಟಿ ರೂ.ಗಳಷ್ಟಿರುತ್ತದೆ. ಈ ಪೈಕಿ 2015-16 ನೇ ಸಾಲಿನ 11.37 ಕೋಟಿ ರೂ., 2018-19 ನೇ ಸಾಲಿನ 11.20 ಕೋಟಿ ರೂ.ಹಾಗೂ 2019-20 ನೇ ಸಾಲಿನ 5.80 ಕೋಟಿ ರೂ.ಬಾಕಿ ಒಳಗೊಂಡಿರುತ್ತದೆ. ಬಾಕಿ ಉಳಿಸಿಕೊಂಡಿರುವ ಈ ಕಾರ್ಖಾನೆಗಳು ನಿಷ್ಕ್ರಿಯವಾಗಿವೆ. ಆದ್ದರಿಂದ ಈ ಕಾರ್ಖಾನೆಗಳಿಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಿ ವಸೂಲಾತಿ ಕ್ರಮ ಜರುಗಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಮಾಸ್ಕ್​ ಹಾಕದೆ ರಸ್ತೆಗಿಳಿದ ಮಹಿಳೆಯ ಕಪಾಳಕ್ಕೆ ಹೊಡೆದ ಪೊಲೀಸ್! ಸಿಟ್ಟಿನಲ್ಲಿ ಪೆಟ್ಟನ್ನು ವಾಪಸು ಕೊಟ್ಟ ಮಹಿಳೆ!

ಕರೊನಾಕ್ಕೆ ಬಲಿಯಾದ ಮಗಳನ್ನು ಹೆಗಲ ಮೇಲೆ ಹೊತ್ತೊಯ್ದು ಅಂತ್ಯಸಂಸ್ಕಾರ ಮಾಡಿದ ತಂದೆ!

ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − five =
Remember me
