ಬೆಂಗಳೂರು:ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:ತೀವ್ರ ಆರ್ಥಿಕ ಸಂಕಷ್ಟ: ಹಿಮಾಚಲ ಪ್ರದೇಶದಲ್ಲಿ ತೆರಿಗೆ ಪಾವತಿಸುವವರಿಗೆ ಉಚಿತ ವಿದ್ಯುತ್‌ ಕಟ್
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು. ಸಿಎಂ ಸಿದ್ದರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು.ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು.
ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು?: ಸಿಎಂ ಸಿದ್ಧರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ ಜಾಗ ಭೂ ಪರಿವರ್ತನೆ ಆಗಿತ್ತು. ಜಮೀನಿನ ಹಿನ್ನಲೆಯನ್ನು ಯಾರೂ ಪರಿಶೀಲಿಸಲಿಲ್ಲ ಏಕೆ?. ಭೂಮಿ ಬದಲಾವಣೆಯಾದಾಗ ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಅವರು ಪ್ರಶ್ನಿಸಿದರು.
1995ರಲ್ಲಿ ಜಮೀನಿನ ಅಂತಿಮ ಭೂಸ್ವಾಧೀನದ ನೋಟಿಫಿಕೇಷನ್ ಆಗಿದೆ:ಈ ಜಮೀನಿನ ಮೂಲದಾರರು ಲಿಂಗ ಆಲಿಯಾಸ್ ಜವರ ಎಂದಿದೆ. ಈ ಜಮೀನನ್ನು 1992ರಲ್ಲಿ ಮುಡಾ ತನ್ನ ವಶಕ್ಕೆ ಪಡೆಯುವ ನೋಟಿಫಿಕೇಷನ್ ಹೊರಡಿಸಿತ್ತು. 1995ರಲ್ಲಿ ಜಮೀನಿನ ಅಂತಿಮ ಭೂಸ್ವಾಧೀನದ ನೋಟಿಫಿಕೇಷನ್ ಆಗಿದೆ. ಆಗ 3 ಎಕರೆ 16 ಗುಂಟಗೆ 1992 ರಲ್ಲೇ ಈ ಜಮೀನಿಗೆ ಮುಡಾದಿಂದ ಕೋರ್ಟ್‌ಗೆ ಹಣ ಸಂದಾಯ ಆಗಿದೆ. ಜಮೀನಿನ ಪೋತಿಯೂ ಆಗಿದೆ. ಆದರೂ 1998ರಲ್ಲಿ ಲಿಂಗನ ಹೆಸರು ಬರುತ್ತದೆ. ಡಿ ನೋಟಿಫಿಕೇಷನ್ ಆಗುತ್ತದೆ. ಈ ಜಮೀನು ಡಿ ನೋಟಿಫಿಕೇಷನ್ ಆದಾಗ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದರು ಎಂದು ಮಾಹಿತಿ ನೀಡಿದರು ಕೇಂದ್ರ ಸಚಿವರು.1988ರಲ್ಲಿ ಲಿಂಗ ಅಲಿಯಾಸ್ ಜವರ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಆಗಿದೆ. 2004ರಲ್ಲಿ ಮಲ್ಲಿಕಾರ್ಜುನಸ್ವಾಮಿ ಜಮೀನು ಖರೀದಿ ಮಾಡುತ್ತಾರೆ. 2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿ ಬದಲಾವಣೆಗೆ ಅರ್ಜಿ ಸಲ್ಲಿಸುತ್ತಾರೆ. ಆಗ ಸಿದ್ಧರಾಮಯ್ಯನವರೇ ಉಪ ಮುಖ್ಯಮಂತ್ರಿ ಆಗಿದ್ದರು. ಭೂಮಿ ಬದಲಾವಣೆಗೆ ಅರ್ಜಿ ಸಲ್ಲಿಸಿದಾಗ ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು. ಜಮೀನಿನ ಹಿನ್ನಲೆ ಪರಿಶೀಲಿಸಲಿಲ್ಲವೆ ಏಕೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
62 ಕೋಟಿ ಯಾರಪ್ಪನ ಆಸ್ತಿ?:ಮುಡಾದಿಂದ ತಮಗೆ 62 ಕೋಟಿ ರೂ. ಪರಿಹಾರ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಯಾರಪ್ಪನ ಆಸ್ತಿ ಎಂದು 62 ಕೋಟಿ ರೂ. ಕೊಡಬೇಕು. ಇದು ಪಿತಾರ್ಜಿತ ಆಸ್ತಿನಾ? ಯಾರ ಬಳಿ ಖರೀದಿ ಮಾಡಿದ್ದಾರೆ ಎಲ್ಲವೂ ಗೊತ್ತಿದೆ, ನನ್ನ ಬಳಿ ಎಲ್ಲ ದಾಖಲೆ ಇದೆ ಎಂದು ದಾಖಲೆಗಳನ್ನು ಪ್ರದರ್ಶಿಸಿದ ಕುಮಾರಸ್ವಾಮಿ ಅವರು, ಇದು ಹಿಟ್ ಅಂಡ್ ರನ್ ಅಲ್ಲ. ದಾಖಲೆ ಸಮೇತ ಮಾಹಿತಿ ಕೊಡುತ್ತಿದ್ದೇನೆ ಎಂದು ತಿರುಗೇಟು ನೀಡಿದರು.
ತಮಿಳುನಾಡನ್ನು ನಿರ್ಲಕ್ಷಿಸಲಾಗಿದೆ ಎಂಬ ಸಿಎಂ ಎಂಕೆ ಸ್ಟಾಲಿನ್ ಆರೋಪ ಸತ್ಯಕ್ಕೆ ದೂರವಾದುದು: ಕೇಂದ್ರ ಸರ್ಕಾರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 + eighteen =
Remember me
