ಬೆಂಗಳೂರು:ಮುಡಾ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಬದಲು, ಈ ಪ್ರಕರಣದ ವಿಚಾರಣೆಗೆ ರಾಜ್ಯ ಸರ್ಕಾರ ರಚಿಸಿರುವ ಪಿ.ಎನ್​. ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ‌ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
ಇದನ್ನೂ ಓದಿ:‘ಕಾಂತಾರ ಚಾಪ್ಟರ್ 1′ ಗಾಗಿ ಕಳರಿಪಯಟ್ಟು ಅಭ್ಯಾಸದಲ್ಲಿ ತೊಡಗಿದ ರಿಷಬ್ ಶೆಟ್ಟಿ
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಪದೇ ಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ಆಯೋಗಕ್ಕೆ ನೀಡಲಿ ಎಂದರು.
ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬೆಜಿಪಿಯವರು ಸೃಷ್ಟಿ ಮಾಡಿದ್ದಾರೆ. ಬಿಜೆಪಿಯವರ ಇತ್ತೀಚಿನ ಬೆಳವಣಿಗೆಗಳೇ ಕಾರಣ ಎಂದು ಹೇಳಿದರು.
ಜೈಲಿಂದಲೇ ಭದ್ರಾವತಿ ಶಾಸಕ ಸಂಗಮೇಶ್​ ಪುತ್ರನ ಹತ್ಯೆಗೆ ಸ್ಕೆಚ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
