ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ಸರ್ಕಾರಕ್ಕೆ 60 ಕೋಟಿ ರೂ. ವಂಚನೆ ಮಾಡಿರುವ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಬುಧವಾರ ಹೆಚ್ಚುವರಿ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿದರು.
ಈಗಾಗಲೇ ಸುಮಾರು 400 ಪುಟಗಳ ದಾಖಲೆಯನ್ನು ಕಳೆದ ಜು.20ರಂದು ಸಿಎಂ ಸಿದ್ಧರಾಮಯ್ಯ ಮತ್ತವರ ಕುಟುಂಬಸ್ಥರು ಹಾಗೂ ಕೆಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರನ್ನು ನೀಡಲಾಗಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳು ಈಗ ನಮಗೆ ದೊರೆತಿದ್ದು, ಅವುಗಳನ್ನು ಸಲ್ಲಿಸಿರುವುದಾಗಿ ಅವರು ತಿಳಿಸಿದರು.
1997-98ರ ಅವಧಿಯಲ್ಲಿ ಎಲ್ ಆ್ಯಂಡ್ ಡಿ ಕಂಪನಿ ಮೂಲಕ ಮೂಡಾ ಸಂಪೂರ್ಣ ಅಭಿವೃದ್ಧಿಪಡಿಸಿ ಡಾಂಬರೀಕರಣಗೊಂಡ ರಸ್ತೆ ಪಾದಚಾರಿ ಮಾರ್ಗ, ಚರಂಡಿ, ಕುಡಿಯುವ ನೀರು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ದೇವನೂರು 3ನೇ ಹಂತದ ಬಡಾವಣೆಯಲ್ಲಿನ ಸೈಟ್‌ಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು. ನಂತರ 3-4 ವರ್ಷಗಳಲ್ಲಿಯೇ ಈ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು.
ಆದರೆ, ಅದಾಗಲೇ ಅಭಿವೃದ್ಧಿಗೊಂಡಿದ್ದ ಸದರಿ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು ಭೂ ಪರಿವರ್ತನೆ ಮಾಡಿ ಕೊಡುವಂತೆ 2004ರ ಡಿ.1ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಅಂದಿನ ಡಿಸಿಯವರು ತಾಲ್ಲೂಕು ತಹಸೀಲಾರ್ ವರದಿಯನ್ನಾಧರಿಸಿ 2005ರ ಜೂ.17ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂ: 464ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ ಎಂದು ಸ್ಥಳ ತನಿಖಾ ಟಿಪ್ಪಣಿಯಲ್ಲಿ ಲಿಖಿತವಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.
2004-2006ರ ಅವಧಿಯಲ್ಲಿ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಡಿಸಿಎಂ/ ಹಣಕಾಸು ಸಚಿವ / ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿದ್ಧರಾಮಯ್ಯ ರಾಜಕೀಯ ಪ್ರಭಾವಕ್ಕೆ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಆಗಿನ ಡಿಸಿ ಮತ್ತು ತಹಸೀಲ್ದಾರ್ ಈ ರೀತಿಯ ಕಾನೂನು ಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿದ್ದಾರೆಂದು ರಮೇಶ್ ಆರೋಪಿಸಿದರು.
ಸದ್ಯ ತನಿಖಾ ಹಂತದಲ್ಲಿರುವ ಮುಡಾದ ಬದಲಿ ಸೈಟ್‌ಗಳ ಹಗರಣದ ತನಿಖೆಗೆ, ಈ ಪತ್ರದೊಂದಿಗೆ ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ರಮೇಶ್ ಎನ್.ಆರ್. ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
