ಬೆಂಗಳೂರು:ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ.
ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಮ್ಮ ಸದಾಶಿವನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮೂರು ದಿನಗಳ ಹಿಂದಷ್ಟೇ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೀಗ ಯೂಟರ್ನ್ ಹೊಡೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆತುರಾತುರವಾಗಿ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಗುರುವಾರ ರಾತ್ರಿಯೇ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಅನ್ನುವ ಅನುಮಾನ ಇದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್ ಕೊಟ್ಟಿದ್ದಾರೆ ಎಂದರು.
ಜುಲೈ 26ರಂದೇ ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಸಿಎಸ್ ಉತ್ತರ ನೀಡಿದ್ದಾರೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದಿಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ನ್ಯಾಯಾಲಯದ ಬಾಗಿಲು ತಟ್ಟಬೇಕಾಗುತ್ತದೆ ಎಂದು ಡಾ.ಪರಮೇಶ್ವರ ಹೇಳಿದರು.
ಸುಪ್ರೀಂಕೋರ್ಟ್ ಒಳ ಮೀಸಲಾತಿ ಗೊಂದಲ ಬಗೆಹರಿಸಿದೆ. ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸ್ತೇವೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಚರ್ಚೆ ನಡೆಸುತ್ತೇವೆ.-ಡಾ.ಜಿ.ಪರಮೇಶ್ವರ, ಗೃಹ ಸಚಿವರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
