ಚಿಕ್ಕಮಗಳೂರು:ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮೂಡಿಗೆರೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ಅವರು ಉಚಿತ ಟಿಕೆಟ್​ ಪಡೆದು ಪ್ರಯಾಣ ಮಾಡಿದರು.
ಶಕ್ತಿ ಯೋಜನೆಗೆ ಚಾಲನೆ ನೀಡಿ, ಮೂಡಿಗೆರೆಯಿಂದ ಬೇಲೂರಿಗೆ ಟಿಕೆಟ್ ಪಡೆದು ಪ್ರಯಾಣ ಆರಂಭಿಸಿದರು. ಈ ವೇಳೆ ಶಾಸಕಿ ನಯನಾಗೆ ಮಹಿಳೆಯರು ಸಾಥ್ ನೀಡಿದರು. ಸುಮಾರು 15 ಕಿ.ಮೀ. ದೂರ ಪ್ರಯಾಣ ಮಾಡಿದರು.
ನಯನಾ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ. ಚಿಕ್ಕಮಗಳೂರಿನ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕಿ. ಬಿಜೆಪಿ ಅಭ್ಯರ್ಥಿಯಾಗಿದ್ದ ದೀಪಕ್​ ದೊಡ್ಡಯ್ಯ ವಿರುದ್ಧ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕಿಯಾಗಿ ವಿಧಾನಸೌಧದ ಪ್ರವೇಶಿಸಿದ್ದಾರೆ.
ಇದನ್ನೂ ಓದಿ:ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದು: ರಾಜ್ಯದಲ್ಲಿ ಇನ್ಮುಂದೆ ಮಹಿಳೆಯರಿಗೆ ಬಸ್​ ಪ್ರಯಾಣ ಫ್ರೀ!
ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಬಳಿಕ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.
ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮ್ಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಬಿಎಂಟಿಸಿ ಬಸ್​ನಲ್ಲಿ ಮೆಜೆಸ್ಟಿಕ್​ಗೆ ಒಟ್ಟಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಡಿಸಿಎಂ ಡಿಕೆಶಿ ಅವರು ಮಹಿಳೆಯರಿಗೆ ಉಚಿತವಾಗಿ ಟಿಕೆಟ್​ ಸಹ ವಿತರಣೆ ಮಾಡಿದರು. ಬಸ್​ ಮೆಜಿಸ್ಟಿಕ್ ತಲುಪಿದ ಬಳಿಕ ​ಧರ್ಮಸ್ಥಳಕ್ಕೆ ಹೊರಡುವ ಮೊದಲ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮೆಜೆಸ್ಟಿಕ್​ನಿಂದ ಹೊರಟ ಬಸ್​ಗಳಿಗೆ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಮತ್ತು ಸಾರಿಗೆ ಸಚಿವರು ಹಸಿರು ನಿಶಾನೆ ತೋರಿದರು.
ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!

ಧರ್ಮಸ್ಥಳಕ್ಕೆ ಹೊರಟ ಬಸ್​ನಲ್ಲಿ ಉಚಿತ ಟಿಕೆಟ್​ ವಿತರಿಸಿದ ಸಿಎಂ: ರಾಜ್ಯಾದ್ಯಂತ ಫ್ರೀ ಬಸ್​ ಪ್ರಯಾಣ ಆರಂಭ

ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೆ: ಟೀಕೆಗಳಿಗೆ ಸೊಪ್ಪು ಹಾಕಲ್ಲ ಎಂದ ಸಿಎಂ ಸಿದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + nineteen =
Remember me
