ಬೆಂಗಳೂರು:ಮುಜರಾಯಿ ಇಲಾಖೆಯ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರಿಗೆ ವಾರದ ರಜೆ ನೀಡಬೇಕು ಎಂದು ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾರ್ಮಿಕ ಕಾಯ್ದೆ ಪ್ರಕಾರ ಕಾಯಂ ಅಥವಾ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ವಾರದಲ್ಲಿ ಒಂದು ದಿನ ರಜೆ ನೀಡಬೇಕಿದೆ. ಅದು ಪ್ರತಿ ಕಾರ್ಮಿಕನ ಮೂಲಭೂತ ಹಕ್ಕು. ಆದರೆ ಮುಜರಾಯಿ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ವಾರದ ರಜೆಯೇ ಇಲ್ಲವಾಗಿದೆ. ಕೆಲವರು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೆಲಸ ಮಾಡುತ್ತಾರೆ. ನೌಕರರು ಸೇವಾ ಕೌಂಟರ್‌ಗಳು, ಪೂಜಾ ಸಾಮಗ್ರಿಗಳ ಸಂಗ್ರಹ ಕೌಂಟರ್, ಕಚೇರಿ ಕೆಲಸ ಮತ್ತಿತರ ಸೇವೆಗಳಲ್ಲಿ ತೊಡಗಿರುತ್ತಾರೆ. ಅರ್ಚಕರಾದರೆ ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಾರೆ. ಆದರೆ ಇವರಿಗೆ ಪಾಳಿಯೂ ಇಲ್ಲ ವಾರದ ರಜೆಯೂ ಇಲ್ಲ. ವಾರದ ಎಲ್ಲ ದಿನವೂ ಕೆಲಸ ಮಾಡಬೇಕಾಗಿದೆ. ಹೀಗಾಗಿ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ವಾರದ ರಜೆ ನೀಡಬೇಕು ಎಂದು ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
