ಮಂಗಳೂರು:ಜೂ.16ರಂದು (ಶುಕ್ರವಾರ) ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ ಮುಲ್ಲೈ ಮುಹಿಲನ್ ಎಂಪಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು ಇಂದು ರವಿಕುಮಾರ್ ಎಂ.ಆರ್ ಅಧಿಕಾರವನ್ನು ಹಸ್ತಾಂತರಿಸಿದ್ದಾರೆ.
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಆಗುವ ಮುನ್ನ, ಮುಲ್ಲೈ ಮುಹಿಲನ್, ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು 2013ರ ಬ್ಯಾಚ್‌ನಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್ ಎಂಆರ್ ಅವರು ಅಕ್ಟೋಬರ್ 31, 2022ರಂದು ಅಧಿಕಾರ ವಹಿಸಿಕೊಂಡಿದ್ದರು.
ಇನ್ನು ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಡಾ.ಕುಮಾರ್, ಫೆ.19 2021ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದರು.(ಏಜೆನ್ಸೀಸ್)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × three =
Remember me
