ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವ ಹಿತದೃಷ್ಟಿಯಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ರಾಜೀವ್ ಗಾಂಧಿ ಸಾರ್ವಜನಿಕ ಆರೋಗ್ಯ ಸಂಶೋಧನಾ ಕೇಂದ್ರ ಮತ್ತು ವಿದ್ಯಾರ್ಥಿ ನಿಲಯ, ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡಲಾ ಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ.
ಕ್ಷೇತ್ರದ ಉಲ್ಲಾಳು, ಕೆಂಗೇರಿ ವಾರ್ಡ್ ನಲ್ಲಿ ಮತಯಾಚಿಸಿ ಮಾತನಾಡಿದರು. ಉಲ್ಲಾಳದ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 209.80 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಈ ಆಸ್ಪತ್ರೆ ನಿರ್ಮಾಣದಿಂದ ಈ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆ ಸಿಗಲಿದೆ ಎಂದರು. ಆರೋಗ್ಯಕರ ಸಮಾಜ ಪ್ರಗತಿಯ ಸೂಚಕ. ಹೀಗಾಗಿ ನಗರ ಮತ್ತು ಗ್ರಾಮೀಣ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡಲು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಭೀಮನಕುಪ್ಪೆ ಗ್ರಾಮದಲ್ಲಿ 200 ಕೋಟಿ ರೂ. ಅನುದಾನದಲ್ಲಿ ರಾಜೀವ್ ಗಾಂಧಿ ಸಾರ್ವಜನಿಕ ಆರೋಗ್ಯ ಸಂಶೋಧನಾ ಕೇಂದ್ರ ಮತ್ತು ವಿದ್ಯಾರ್ಥಿನಿಲಯ ತಲೆ ಎತ್ತಲಿದೆ ಎಂದು ಹೇಳಿದರು.
ಅನಾರೋಗ್ಯಕ್ಕೆ ತುತ್ತಾದ ಸಂದರ್ಭದಲ್ಲಿ ವಿಕ್ಟೋರಿಯಾ, ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಬೇಕಿತ್ತು. ಇಲ್ಲವೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಹಣ ಪಾವತಿಸಬೇಕಿತ್ತು. ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆ ಮಾತಿನಂತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಂಶೋಧನಾ ಕೇಂದ್ರಗಳು ಕ್ಷೇತ್ರದಲ್ಲಿ ತಲೆ ಎತ್ತಲಿದೆ. ಕ್ಷೇತ್ರದ ಜನತೆಗೆ ಮೂಲಸೌಕರ್ಯ ಕಲ್ಪಿಸು ವುದರ ಜತೆಗೆ ಉತ್ತಮ ಆರೋಗ್ಯ ಸೇವೆ ನೀಡಬೇಕೆಂದು ಹತ್ತಾರು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
