
ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಹಂಗಾಮು ಬೆಳೆಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜ ಕೊರತೆ ಆಗದಂತೆ ನೋಡಿಕೊಳ್ಳಲು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.ರಾಜ್ಯಕ್ಕೆ 26.80 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಅಷ್ಟನ್ನೂ ದಾಸ್ತಾನು ಮಾಡಿಟ್ಟುಕೊಳ್ಳಲಾಗಿದೆ. ಮುಂಗಾರು ಹಂಗಾಮಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈಗಾಗಲೇ 11.39 ಲಕ್ಷ ಮೆಟ್ರಿಕ್ ಟನ್ ಗೊಬ್ಬರವನ್ನು ಸರಬರಾಜು ಮಾಡಲಾಗಿದೆ. ಗೋದಾಮಿನಲ್ಲಿ ಇನ್ನೂ 15.22 ಲಕ್ಷ ಮೆಟ್ರಿಕ್ ಟನ್ ಗೊಬ್ಬರದ ದಾಸ್ತಾನು ಇದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ.ಕಳೆದ ವರ್ಷ ಬರಗಾಲ ಬಂದ ಹಿನ್ನೆಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಬಂದಿರಲಿಲ್ಲ. ಹಾಗಾಗಿ ಗೋದಾಮಿನಲ್ಲಿಯೇ ಸಾಕಷ್ಟು ಬಾಕಿಯಾಗಿತ್ತು.ಈ ವರ್ಷ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಕ್ಕೆ ಮೊದಲೇ ಬೇಡಿಕೆ ಶುರುವಾಗಿದೆ. ಇನ್ನೂ ಹೆಚ್ಚಿನ ಬೇಡಿಕೆ ಬಂದಲ್ಲಿ ಅದನ್ನು ನಿಭಾಯಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಿತ್ತನೆ ಬೀಜ:ರಾಜ್ಯಕ್ಕೆ ಎಲ್ಲಾ ರೀತಿಯ ಬೀಜಗಳು ಸೇರಿದಂತೆ 5.53 ಲಕ್ಷ ಮೆಟ್ರಿಕ್ ಟನ್ ಬಿತ್ತನೆ ಬೀಜದ ಅಗತ್ಯವಿದೆ. ಇದರಲ್ಲಿ ಈಗಾಗಲೇ 3 ಲಕ್ಷ ಮೆಟ್ರಿಕ್ ಟನ್ ಬಿತ್ತನೆ ಬೀಜವನ್ನು ರೈತರಿಗೆ ಸರಬರಾಜು ಮಾಡಲಾಗಿದೆ. ರೈತರ ಅಗತ್ಯ ಪೂರೈಕೆ ಮಾಡಲು ಅಗತ್ಯವಾದಷ್ಟು ಬಿತ್ತನೆ ಬೀಜವನ್ನು ಗೋದಾಮುಗಳಲ್ಲಿ ದಾಸ್ತಾನು ಇರಿಸಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಆಯುಕ್ತ ವೈ.ಸಿ.ಪಾಟೀಲ್ ಅವರು ವಿಜಯವಾಣಿಗೆ ಖಚಿತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
