ಹಾಸನ:ನಗರಸಭೆ ಸದಸ್ಯನೊಬ್ಬನನ್ನು ಮಾರ್ಗಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಇಂಥದ್ದೊಂದು ಬರ್ಬರ ಕೊಲೆ ಹಾಸನದಲ್ಲಿ ನಡೆದಿದೆ.
ಹಾಸನ ನಗರಸಭೆಯ 16ನೇ ವಾರ್ಡ್ ರಾಜ್​ಕುಮಾರ್​ ನಗರ ಸದಸ್ಯ ಪ್ರಶಾಂತ್ ನಾಗರಾಜ್​ ಕೊಲೆಗೀಡಾದ ವ್ಯಕ್ತಿ. 15ನೇ ವಾರ್ಡ್ ಲಕ್ಷ್ಮೀಪುರ ಬಡಾವಣೆ 4ನೇ ಮುಖ್ಯರಸ್ತೆ ಬಳಿ ಈ ಕೊಲೆ ಮಾಡಲಾಗಿದೆ. ಈತ ಬೈಕ್​ನಲ್ಲಿ ಹೋಗುವಾಗ ಆಟೋದಲ್ಲಿ ಎದುರಾಗಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.
ಪ್ರಕರಣ ನಡೆಯುತ್ತಿದ್ದಂತೆ ಸ್ಥಳಕ್ಕೆ ಹಾಸನ ಎಸ್​ಪಿ ಶ್ರೀನಿವಾಸ್ ಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಆಸ್ಪತ್ರೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ ನೀಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಶಾವಿಗೆ-ಸಂಡಿಗೆ ಒಣಗಿಸಲು ಬಳಕೆಯಾದ ಸುವರ್ಣಸೌಧ!; ಕೆಲಸ ಕಳೆದುಕೊಂಡ ಮಹಿಳೆ, ಇಂಜಿನಿಯರ್​ಗೆ ನೋಟಿಸ್​..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
