ಬೆಂಗಳೂರು:ಇದೀಗ ಬಿಜೆಪಿಯ ಶಾಸಕರಿಗೆ ಕಾಂಗ್ರೆಸ್ ತನ್ನ ಬಾಗಿಲನ್ನು ತೆರೆದಿಟ್ಟಿದ್ದು, ಹಳೆಯ ಶಾಸಕರು ತಪ್ಪನ್ನು ತಿದ್ದಿಕೊಳ್ಳಲು ವಾಪಸ್ ಬರುವುದಾದರೆ ಬರಬಹುದು ಎಂದು ಪರಮೇಶ್ವರ್ ಖಚಿತ ಪಡಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‍ಗೆ ಮುನಿರತ್ನ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆ ಬಂದಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, “ಬಿಜೆಪಿ ಶಾಸಕರು ಬರಬಹುದು, ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಅಂತ ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ನಮ್ಮಲ್ಲಿ ಸೇರ್ಪಡೆ ಮಾಡಿಕೊಳ್ತೀವಿ. ಈಗಾಗಲೇ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ತೀವಿ ಅಂತ ಹೇಳಿದ್ದಾರೆ
ಹಿಂದೆ ಪಕ್ಷ ಬಿಟ್ಟು ಹೋದವರೂ ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್ಶಿಪ್‍ ಮೇಲೆ ನಂಬಿಕೆ‌ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೇಂಚ್ ಸಿಗುವುದಿಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಅಂದ್ರೆ ಮಾಡಿಕೊಂಡು ಬರಬಹುದು” ಎಂದಿದ್ದರು.
ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಮರಳುವ ವಿಚಾರವಾಗಿ ಮಾತನಾಡಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ, “17 ಜನರಲ್ಲಿ ಯಾರು ಹೋಗ್ತಾರೋ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಆಗುತ್ತೇನೆ. ಕಾಂಗ್ರೆಸ್ ಗೆ ಹೋಗುವ ಅವಶ್ಯಕತೆ ನನಗೆ ಇಲ್ಲ” ಎಂದಿದ್ದಾರೆ.
ಇದೇ ವೇಳೆ ಡಿ.ಕೆ. ಶಿವಕುಮಾರ್ ಜತೆಗಿನ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, “ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಚಿವರು. ಅವರ ಜೊತೆ ಯಾವುದೇ ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ಕೊಡುತ್ತಾರಾ ಅಥವಾ ಬೆಂಗಳೂರಿನ ಸಚಿವರಾಗಿ ಉತ್ತರ ಕೊಡುತ್ತಾರಾ ನನಗೆ ಗೊಂದಲ ಆಗುತ್ತಿದೆ. ಯಾರಾದರೂ ಅವರ ಮನೆಗೆ ಹಿಂಬಾಗಿಲಿನಿಂದ ಹೋಗಿದ್ದಾರಾ, ಬುರ್ಖಾ ಹಾಕಿಕೊಂಡು ಹೋಗಿದ್ದಾರಾ?
ಮೊದಲು ಅವರು ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಎಲ್ಲರನ್ನೂ ಕರೆದು ಸಭೆ ಮಾಡಲಿ. ಅವರ ಶಾಸಕರಿಗೆ ಅನುದಾನ ಕೊಡಲಿ, ನಂತರ ನಮಗೆ ಕೊಡಲಿ. ವೈಯಕ್ತಿಕವಾಗಿ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜೊತೆ ಯಾವುದೇ ದ್ವೇಷ ಇಲ್ಲ. ಅಧಿಕಾರಕ್ಕೋಸ್ಕರ ನಾನು ಪಕ್ಷ ಬಿಟ್ಟು ಹೋಗಲ್ಲ. ನಾನು ವಿಪಕ್ಷದಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿ ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ನಳೀನ್ ಕುಮಾರ್ ಕಟೀಲ್ ಗೌರವದಿಂದ ಮಾತಾಡಿಸುತ್ತಾರೆ, ಎಂದೂ ಏಕವಚನದಿಂದ ಮಾತಾಡಿಸಿಲ್ಲ” ಎಂದಿದ್ದಾರೆ.
ಡಿ.ಕೆ. ಶಿವಕುಮಾರ್ ರಾಜಕೀಯ ಗುರು ಎಂಬ ಎಸ್.ಟಿ. ಸೋಮಶೇಖರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುನಿರತ್ನ, “ಅದು ಅವರ ವೈಯಕ್ತಿಕ ಅಭಿಪ್ರಾಯ. ನನಗೆ ಶಿವಕುಮಾರ್ 40 ವರ್ಷಗಳ ಸ್ನೇಹಿತರು. ನನ್ನ ಜೀವನದ ಗುರು, ರಾಜಕೀಯ ಗುರು ಬಿ.ಕೆ. ಹರಿಪ್ರಸಾದ್. ಅದು ರಾಜಕೀಯ ಕಾರಣ ಅಲ್ಲ. ಅದು ನಮ್ಮ ಊರಿನ ಸಂಬಂಧ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆ. ಬಿಜೆಪಿ ಬಗ್ಗೆ ನನಗೆ ನಂಬಿಕೆ, ಗೌರವ ಇದೆ” ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
