ಹುಬ್ಬಳ್ಳಿ:ಸೀರಿಯಲ್ ನಟಿಗಾಗಿ ಕೊಲೆ ಮಾಡಿ ರುಂಡ-ಮುಂಡ ಬೇರ್ಪಡಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆ ಮೂಲಕ ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲ್ಪಟ್ಟಿದ್ದು, ಕೊಲೆ ಹಿಂದಿನ ಪ್ರೇಮಕಥೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ದೇವರಗುಂಡಿಹಾಳದಲ್ಲಿ ಇತ್ತೀಚೆಗೆ ರುಂಡವೊಂದು ಸಿಕ್ಕಿತ್ತು. ಈ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಪೊಲೀಸರು ಕೊನೆಗೂ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಿಯಾಜ್ ಅಹ್ಮದ್ ಕಟಿಗಾರ, ತೌಸಿಫ್ ಚಿನ್ನಾಪೂರ, ಅಲ್ತಾಫ ಮುಲ್ಲಾ ಹಾಗೂ ಅಮನ ಗಿರಣಿವಾಲೆ ಬಂಧಿತರು.
ತನಿಖೆ ನಡೆಸಿದ ಪೊಲೀಸರಿಗೆ ಸೀರಿಯಲ್ ನಟಿ ಶನಾಯ್​ ಕಾಟ್ವೆ ಎಂಬಾಕೆಗಾಗಿ ಈ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆ ಆರೋಪಿ ನಿಯಾಜ್​ ಹಾಗೂ ಶನಾಯ್​ಗೂ ಪ್ರೇಮವಿತ್ತು. ಆದರೆ ಅದಕ್ಕೆ ಯುವತಿಯ ಸೋದರ ರಾಕೇಶ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಗಳು ಆತನನ್ನು ಕೊಲೆಗೈದು, ರುಂಡ ಬೇರ್ಪಡಿಸಿ ದೇವರಗುಂಡಿಹಾಳದಲ್ಲಿ ಎಸೆದಿದ್ದರು. ಬಳಿಕ ದೇಹದ ಉಳಿದ ಭಾಗಗಳನ್ನು ಸುಟ್ಟುಹಾಕಿ ಸಾಕ್ಷ್ಯನಾಶಕ್ಕೆ ಯತ್ನಿಸಿದ್ದರು. ಅದಾಗ್ಯೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ಧಾರವಾಡ ಎಸ್​ಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.
ಉಗುರು ಉದ್ದ ಇದೆ, ಓಲೆ ದೊಡ್ಡದಿದೆ, ಜತೆಗೆ ಮೊಬೈಲ್​ಫೋನ್​ ಇದೆ ಎಂದು ಬೈದ ಪ್ರಾಂಶುಪಾಲ; ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 12 =
Remember me
