ಮಂಡ್ಯ:ಸಕ್ಕರೆ ನಾಡು ಮಂಡ್ಯದಲ್ಲಿ ಜನರು ಬೆಚ್ಚಿ ಬೀಳುವಂಥ ಭಯಂಕರ ಮರ್ಡರ್ ನಡೆದಿದೆ. ಬರ್ಬರವಾಗಿ ಕೊಲೆ ಮಾಡಿರುವ ಹಂತಕರು ರುಂಡವನ್ನು ಕತ್ತರಿಸಿದ್ದಲ್ಲದೆ ಕೈ-ಕಾಲುಗಳನ್ನು ಕತ್ತರಿಸಿ ನಾಲೆಗೆ ಎಸೆದಿದ್ದಾರೆ.
ಕೊಲೆಯಾದ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. 30- 40 ವರ್ಷದ ವ್ಯಕ್ತಿಯದ್ದು ಎನ್ನಲಾದ ಮೃತದೇಹದ ಭಾಗಗಳು ಸಿಕ್ಕಿವೆ. ಮಂಡ್ಯ ತಾಲೂಕಿನ ಹೊಡಘಟ್ಟ, ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ಶವದ ಭಾಗಗಳು ಪತ್ತೆಯಾಗಿವೆ.
ದುಷ್ಕರ್ಮಿಗಳು ಕೊಲೆಗೈದು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಹೊಡಾಘಟ್ಟ ಬಳಿ ತೊಡೆ ಮತ್ತು ಸೊಂಟದ ಭಾಗ, ಶಿವಾರದ ಸಮೀಪ ಒಂದು ಕಾಲು, ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.
ಇದನ್ನೂ ಓದಿ:ಐಪಿಎಸ್​ ರೂಪಾ-ಐಎಎಸ್​ ರೋಹಿಣಿ ಜಟಾಪಟಿ ಮತ್ತೊಂದು ಹಂತಕ್ಕೆ: ಇಲ್ಲಿದೆ ಇಂದಿನ ಲೇಟೆಸ್ಟ್ ಬೆಳವಣಿಗೆ
ಶವದ ಎಡಗೈ ಮೇಲೆ ಕಾವ್ಯ, ರಘು ಹಾಗೂ ಬಲಗೈಯಲ್ಲಿ ವನಜಾ ಎಂಬ ಹಚ್ಚೆ ಕಂಡುಬಂದಿದೆ. ಮೃತದೇಹದ ಭಾಗಗಳನ್ನು ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಡ್ಯ ಎಸ್​ಪಿ ಎನ್. ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚನೆಗೆ ಎಸ್​​ಪಿ ಚಿಂತನೆ ನಡೆಸಿದ್ದು, ಪೊಲೀಸರು ಮೊದಲು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ. ಎಲ್ಲಾ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೃತ ವ್ಯಕ್ತಿಯ ಗುರುತು ಪತ್ತೆ ಮಾಡಿ ಕೊಲೆಗಾರರಿಗೆ ಬಲೆ ಬೀಸುವ ನಿಟ್ಟಿನಲ್ಲಿ ತನಿಖೆ ಆರಂಭವಾಗಿದೆ.
ವಿಜ್ಞಾನಿಗಳಿಂದಷ್ಟೇ ಅಲ್ಲ, ಕಾಲಜ್ಞಾನದಲ್ಲೂ ಭೂಕಂಪದ ಎಚ್ಚರಿಕೆ; ದೇಶಕ್ಕೆ ಕಾದಿದ್ಯಾ ಭಾರಿ ಗಂಡಾಂತರ?

ಬರ್ತ್​ಡೇ ಪಾರ್ಟಿಯಲ್ಲಿ ಚಿತ್ರನಟನ ಮೇಲೆ ಹಲ್ಲೆ; ಆಡಿ ಕಾರಿನ ಗಾಜುಗಳು ಧ್ವಂಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
