ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಜೈಲಿನಲ್ಲಿ ಕೈದಿಗಳ ನಡುವೆ ಅಂತರ ಕಾಪಾಡುವುದು ಕಷ್ಟವಾಗುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಇಬ್ಬರು ಮಹಿಳೆಯರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಚಿಕ್ಕಬಳ್ಳಾಪುರದ ಅನಸೂಯಮ್ಮ ಹಾಗೂ ದ್ಯಾವಮ್ಮ ಎಂಬುವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, 50 ಸಾವಿರ ರೂ. ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಒದಗಿಸಬೇಕು. ಸಾಕ್ಷ್ಯ ನಾಶಪಡಿಸುವ ಯತ್ನ ಮಾಡಬಾರದು, ಎರಡು ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು, ನ್ಯಾಯಾಲಯದ ವಿಚಾರಣೆಗೆ ತಪ್ಪದೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಸಿಇಟಿ, ನೀಟ್ ಆಕಾಂಕ್ಷಿಗಳ ಗಮನಕ್ಕೆ – ದಯಾನಂದ ಸಾಗರ್ ವಿವಿಯಲ್ಲಿ ಇಂದಿನಿಂದ ಉಚಿತ ಆನ್​ಲೈನ್ ಕೋಚಿಂಗ್
ಅರ್ಜಿದಾರರ ವಿರುದ್ಧ ಕೊಲೆ ಹಾಗೂ ಸಾಕ್ಷ್ಯ ನಾಶಪಡಿಸಿದ ಪ್ರಕರಣ ದಾಖಲಿಸಲಾಗಿದೆ. ಕೊಲೆ ನಡೆದ ಸಂದರ್ಭದಲ್ಲಿ ಮನೆಯ ಗೋಡೆ ಹಾಗೂ ನೆಲದ ಮೇಲಿದ್ದ ಮೃತರ ರಕ್ತದ ಕಲೆಗಳನ್ನು ತೊಳೆದು ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಅವರ ವಿರುದ್ಧ ಆರೋಪ ಮಾಡಲಾಗಿದೆ. ಈ ಹಂತದಲ್ಲಿ ಅರ್ಜಿದಾರರ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಆರೋಪ ಮಾತ್ರ ಹೊರಿಸ ಬಹುದಾಗಿದೆ. ಆರೋಪಿಗಳು ಮಹಿಳೆಯರಾಗಿದ್ದು, ಗೌರವಯುತ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೇಲಾಗಿ ಕೋವಿಡ್-19 ಸಂದರ್ಭದಲ್ಲಿ ಜೈಲಿನಲ್ಲಿರುವ ಸಹ ಕೈದಿಗಳ ಜತೆ ಅಂತರ ಕಾಯ್ದುಕೊಳ್ಳುವುದು ಸ್ವಲ್ಪ ಕಷ್ಟವಾಗಬಹುದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಇಬ್ಬರಿಗೂ ಜಾಮೀನು ಮಂಜೂರು ಮಾಡಿತು.
ಎಸ್​ಐ ಹುದ್ದೆ ಸಿಕ್ಕರೂ ಕಾನ್ಸ್​ಟೆಬಲ್ ಆಗಿರೋದೆ ವಾಸಿ ಅನ್ನೋ ನಿರ್ಧಾರಕ್ಕೇ ಅಂಟಿಕೊಂಡ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
