ಬೆಂಗಳೂರು:ಇಂದು (ಮಂಗಳವಾರ) ವಿಧಾನ ಪರಿಷತ್​ನಲ್ಲಿ ಜೆಡಿಎಸ್​ ಸದಸ್ಯ ಮರಿತಿಬ್ಬೇಗೌಡ, ಭೂಮಿ ಹಂಚಿಕೆ ವಿಚಾರವಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಅದಕ್ಕೆ ಉತ್ತರಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ಆರ್ ನಿರಾಣಿ ‘ಕೆಐಎಡಿಬಿ ಭೂ ಸ್ವಾಧೀನ ಮಾಡಿಕೊಳ್ಳುವ ಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ’ ಎಂದು ಹೇಳಿದ್ದಾರೆ.ಇಂದು (ಮಂಗಳವಾರ), ವಿಧಾನಪರಿಷತ್​ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಸಚಿವರು ‘ಕೈಗಾರಿಕಾದ್ಯಮಿಗಳಿಗೆ ಭೂಮಿ ಹಂಚಿಕೆ ಮಾಡುವಾಗ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು ಹತ್ತಿರದಲ್ಲೇ ವಾಸ ಮಾಡಲು ಅನುಕೂಲ ಮಾಡಿ ವಸತಿ ನಿರ್ಮಿಸಲು, ಅದಕ್ಕೆ ಪೂರಕವಾಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸೇರಿದಂತೆ ಇತರ ಅನೇಕ ಜೀವನಾವಶ್ಯಕ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾದ ಭೂಮಿಯಲ್ಲಿ ಶೇ.15ರಷ್ಟು ಬಳಕೆ ಮಾಡಿಕೊಳ್ಳಲು ಅವಕಾಶವಿದೆ’ ಎಂದು ಹೇಳಿದರು.‘ಅದೇ ರೀತಿ ಬ್ರಿಗೇಡ್ ಸಂಸ್ಥೆಗೆ ತಲಾ 25 ಎಕರೆಯಂತೆ ಎರಡು ಬಾರಿ ಭೂಮಿ ನೀಡಲಾಗಿದೆ. 2002ರಲ್ಲಿ ಭೂಮಿ ನೀಡಲಾಗಿತ್ತು. ಅದರಲ್ಲಿ ಶೇ.15ರಷ್ಟು ಭೂಮಿಯನ್ನು ವಸತಿ, ಆಸ್ಪತ್ರೆ, ಶಾಲೆ ಕಟ್ಟಲು ಬಳಕೆ ಮಾಡಿಕೊಳ್ಳುತ್ತಿದ್ದು, 11 ಟವರ್ ನಿರ್ಮಿಸುವ ಗುರಿ ಇದೆ. ಈಗಾಗಲೇ ಏಳು ಟವರ್ ನಿರ್ಮಿಸಲಾಗಿದ್ದು ಉಳಿದ ಟವರ್​ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಿಸಿ ಕೊಡಲಾಗುವುದು’ ಎಂದು ನಿರಾಣಿ ತಿಳಿಸಿದರು.ಕೌಶಲ್ಯ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಸಂಸ್ಥೆ ಸ್ಥಾಪಿಸಲು ಬ್ರಿಗೇಡ್ ಗ್ರೂಪ್​ಗೆ ಭೂಮಿ ನೀಡಲಾಗಿದೆ. ಅದನ್ನು ಉಚಿತವಾಗಿ ನೀಡಿಲ್ಲ. ಭೂಮಿಯಿಂದ ಸರ್ಕಾರಕ್ಕೆ ಬರಬೇಕಾದ ಹಣ ಪಡೆಯಲಾಗಿದೆ. ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ನಿರಾಣಿ ಸ್ಪಷ್ಟನೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 5 =
Remember me
