ಬೆಂಗಳೂರು:ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಸಹಭಾಗಿತ್ವದಲ್ಲಿ ಭಾನುವಾರ (ಫೆ.19) ಸಂಗೀತ ಸಂಜೆ ಆಯೋಜನೆ ಮಾಡಲಾಗಿದ್ದು ಪದ್ಮಶ್ರೀ ಪಂಡಿತ್ ವೆಂಕಟೇಶಕುಮಾರ್, ಪ್ರಸಿದ್ಧ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್ ಸೇರಿ ಹೆಸರಾಂತ ಸಂಗೀತಗಾರರು ಪಾಲ್ಗೊಳ್ಳಲಿದ್ದಾರೆ.
ಕಬ್ಬನ್​ಪಾರ್ಕ್ ಎದುರಿಗಿರುವ ಎಂ.ಎಸ್. ಬಿಲ್ಡಿಂಗ್​ನ ರಾಜ್ಯ ಸರ್ಕಾರಿ ಉದ್ಯೋಗಿಗಳ ಸಂಘದ ಸಭಾಂಗಣದಲ್ಲಿ ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಉಸ್ತಾದ್ ರಫೀಕ್ ಖಾನ್ ಹಾಗೂ ಅಂಕುಶ್ ನಾಯಕ್ ಅವರ ಸಿತಾರ್ ಜುಗಲಬಂಧಿ ನಡೆಯಲಿದ್ದು, ಪಂ. ರಾಜೇಂದ್ರ ನಾಕೋಡ್ ತಬಲಾ ಸಾಥ್ ನೀಡುವರು. ನಂತರ ಪಂ. ವೆಂಕಟೇಶಕುಮಾರ್ ಗಾನಸುಧೆ ಹರಿಸಲಿದ್ದಾರೆ. ಅವರಿಗೆ ನರೇಂದ್ರ ನಾಯಕ್ ಹಾರ್ವೆನಿಯಂ ಹಾಗೂ ಕೇಶವ್ ಜೋಶಿ ತಬಲಾ ಸಾಥ್ ನೀಡುವರು. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ.
ಸಂರ್ಪಸಿ:ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಶಿವಮೂರ್ತಿ- 8884432389, ಸದಾಶಿವ್- 6363933258, ಅಖಿಲೇಶ್- 9986172645 ಅವರನ್ನು ಸಂರ್ಪಸಬಹುದು.
ನೋಂದಣಿ ಹೇಗೆ?
ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಲಿಂಕ್ ಕ್ಲಿಕ್ಕಿಸಿ ಈಗಲೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.
Sangeeth Sanjey 2023 – Register Now
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
