ಭಟ್ಕಳ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಇನ್ನು ಭಟ್ಕಳದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಮಂಕಾಳು ವೈದ್ಯ​ ಗೆದ್ದ ಬೆನ್ನಲ್ಲೇ ಸಂಭ್ರಮಾಚರನೆ ಮುಗಿಲು ಮುಟ್ಟಿದ್ದು ಈ ವೇಳೆ ಯುವಕನೊಬ್ಬ ಮುಸ್ಲಿಂ ಧ್ವಜವನ್ನು ಹಾರಿಸಿದ್ಧಾನೆ.
ಮಂಕಾಳು ವೈದ್ಯ ಅವರ​ ಗೆಲುವು ಖಾತ್ರಿಯಾಗುತ್ತಿದ್ದಂತೆ ಭಟ್ಕಳ ಪಟ್ಟಣ್ಣದಲ್ಲಿ ಜಮಾಯಿಸಿದ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನ ಪರ ಘೋಷಣೆಗಳನ್ನು ಕೂಗಿದ್ದಾರೆ.
And this from Batkal today .pic.twitter.com/bvGRzerSft
ಮೆರವಣಿಗೆ ನಗರದ ಪ್ರಮುಖ ವೃತ್ತ ತಲುಪಿದ ಸಮಯದಲ್ಲಿ ಯುವಕರು ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌, ಕೇಸರಿ ಹಾಗೂ ಮುಸ್ಲಿಂ ಧ್ವಜವನ್ನು ಹಾರಿಸಿದ್ದಾರೆ.
ಇದನ್ನೂ ಓದಿ:ಜನತೆ ಬಿಜೆಪಿಯ ಹಿಂದುತ್ವ ರಾಜಕೀಯವನ್ನು ತಿರಸ್ಕರಿಸಿ, ಕಾಂಗ್ರೆಸ್​ ಬಂಧುತ್ವವನ್ನು ಪುರಸ್ಕರಿಸಿದ್ದಾರೆ: ಸಿದ್ದರಾಮಯ್ಯ
ಇನ್ನು ಯುವಕರ ಈ ಕಾರ್ಯಕ್ಕರ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದು ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಯುವಕರ ನಡೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
