ಉತ್ತರಕನ್ನಡ:ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದ ಕುರಿತಂತೆ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಿಗೇ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬಂದ್ ಕಂಡು ಬಂದಿದೆ.
ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ ಎಂಬ ರಾಜ್ಯ ಸರ್ಕಾರದ ಆದೇಶವನ್ನೇ ಹೈಕೋರ್ಟ್​ ಎತ್ತಿಹಿಡಿದು ತೀರ್ಪು ನೀಡಿದೆ. ಈ ಮೂಲಕ ಹಿಜಾಬ್ ಕುರಿತ ವಿವಾದ ತಾತ್ಕಾಲಿಕವಾಗಿ ತಣ್ಣಗಾದಂತಾಗಿದ್ದರೂ, ಕೆಲವರು ತೀರ್ಪಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಹೋಗುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಒಂದು ಹುಚ್ಚುನಾಯಿಗಾಗಿ ಶುರುವಾಗಿದೆ ಈ ಊರಲ್ಲಿ ಹುಡುಕಾಟ!
ಇನ್ನು ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿದ್ದು, ಒಂದು ಕೋಮಿನ ಜನರು ಹೆಚ್ಚಾಗಿರುವ ಭಟ್ಕಳದಲ್ಲಿ ಬಂದ್ ವಾತಾವರಣ ಕಾಣಿಸಿದೆ. ಇಲ್ಲಿನ ಮುಸ್ಲಿಂ ವರ್ತಕರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಹೈಕೋರ್ಟ್ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮುಂದಿನ ನಡೆ ಕುರಿತು ತಂಜೀಮ್ ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ವರ್ತಕರು ಸಭೆ ನಡೆಸಿದ್ದಾರೆ.
ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 9 =
Remember me
