ಬೆಂಗಳೂರು:ಮದುವೆ ಆಮಿಷವೊಡ್ಡಿ ಹಿಂದು ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿದ ಆರೋಪದ ಮೇಲೆ ಯುವಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಕರ್ನಾಟಕ ಧಾರ್ವಿುಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಅನ್ವಯ ಪ್ರಕರಣ ದಾಖಲಿಸಿದ್ದು, ಇದು ರಾಜ್ಯದಲ್ಲಿ ದಾಖಲಾದ ಮೊದಲ ಪ್ರಕರಣ. ಯಶವಂತಪುರ ಬಿ.ಕೆ.ನಗರ ನಿವಾಸಿ ಸೈಯದ್ ಮೋಯಿನ್ (23) ಬಂಧಿತ.
ಅ. 5ರಂದು ಮನೆ ಸಮೀಪದ 19 ವರ್ಷದ ಯುವತಿಯನ್ನು ಆಂಧ್ರಪ್ರದೇಶದ ಪೆನುಗೊಂಡ ದರ್ಗಾಕ್ಕೆ ಕರೆದುಕೊಂಡು ಹೋಗಿ ಮತಾಂತರ ಮಾಡಿದ್ದ. ಈ ಸಂಬಂಧ ಯುವತಿ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೈಯದ್ ಮೋಯಿನ್ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಅ. 5ರ ಸಂಜೆ 4 ಗಂಟೆಗೆ ಅಂಗಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಹೋಗಿದ್ದ ಯುವತಿ, ರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದ ಪಾಲಕರು, ಸೈಯದ್ ಮೋಯಿನ್ ಜತೆಗೆ ಹೋಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು.
ಮತ್ತೊಂದೆಡೆ ಅ. 9ಕ್ಕೆ ಸೈಯದ್ ಮೋಯಿನ್ ಮತ್ತು ಯುವತಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಯುವತಿ ಸ್ವಯಂ ಪ್ರೇರಣೆಯಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆ ಆಗಿರುವುದಾಗಿ ಹೇಳಿಕೆ ನೀಡಿದ್ದಳು. ಆದರೆ, ಮತಾಂತರ ನಿಷೇಧ ಕಾಯ್ದೆ ಪ್ರಕಾರ, ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನುಬಾಹಿರವಾಗಿದೆ.
ಮದುವೆ ಆಮಿಷವೊಡ್ಡಿ ಯುವತಿಯನ್ನು ಮತಾಂತರ ಮಾಡಿದ್ದಾನೆ. ಇದರ ಅನ್ವಯ ಮತಾಂತರ ನಿಷೇಧ ಕಾಯ್ದೆಯಡಿ ಎಫ್​ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
|ವಿನಾಯಕ್ ಪಾಟೀಲ್ಬೆಂಗಳೂರು ಉತ್ತರ ವಿಭಾಗದ ಡಿಸಿಪಿ
ಕಾನೂನು ಹೇಳುವುದೇನು?:ಕರ್ನಾಟಕ ಧಾರ್ವಿುಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಪ್ರಕಾರ ಯಾವುದೇ ವ್ಯಕ್ತಿ ಸ್ವಯಂ ಪ್ರೇರಣೆಯಿಂದ ಬೇರೆ ಮತಕ್ಕೆ ಮತಾಂತರ ಆಗುವ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಜಿಲ್ಲಾಧಿಕಾರಿ, 30 ದಿನಗಳೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುತ್ತಾರೆ. ಆಕ್ಷೇಪಣೆಗಳು ಬಂದರೆ, ಈ ಸಂಬಂಧ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆಯಲ್ಲಿ ವ್ಯಕ್ತಿ, ಆಸೆ-ಆಮಿಷಗಳಿಗೆ ಒಳಗಾಗಿರುವುದು ಅಥವಾ ಬಲವಂತಕ್ಕೆ ಮತಾಂತರ ಆಗುತ್ತಿರುವುದು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಿದ್ದಾರೆ. ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದಲ್ಲಿ ಕಾನೂನುಬದ್ಧ ಮತಾಂತರಕ್ಕೆ ಅನುಮೋದನೆ ಸಿಗಲಿದೆ. ಸೆಕ್ಷನ್ 5ರ ಪ್ರಕಾರ ಬಲವಂತದ ಮತಾಂತರಕ್ಕೆ 3 ರಿಂದ 5 ವರ್ಷ ಜೈಲು ಮತ್ತು 25 ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.
ಕಾಂತಾರ: 2 ವಾರ ಕಳೆದರೂ ತಗ್ಗದ ಅಬ್ಬರ; ಬಾಲಿವುಡ್ ಚಿತ್ರಗಳೆರಡೂ ತತ್ತರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 10 =
Remember me
