ಮೈಸೂರು:ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಈ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು.ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಅದರಂತೆ ಮನವಿಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ಸಂಸದರು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರ ಜತೆಗೆ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂಬ ನನ್ನ ಬೇಡಿಕೆಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಒಪ್ಪುಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ@BSBommaiಧನ್ಯವಾದಗಳು. ಮೂಲಭೂತ ಸೌಕರ್ಯ ಖಾತೆ ಸಚಿವರಾದ ವಿ. ಸೋಮಣ್ಣ ಸರ್ ಹಾಗು ಉಸ್ತುವಾರಿ ಸಚಿವರಾದ ಎಸ್ಟಿ ಸೋಮಶೇಖರ್ ಸರ್ ರಿಗೂ ಕೃತಜ್ಞತೆಗಳು.pic.twitter.com/Kn97VmB5A1— Pratap Simha (@mepratap)July 22, 2022
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂಬ ನನ್ನ ಬೇಡಿಕೆಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಒಪ್ಪುಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ@BSBommaiಧನ್ಯವಾದಗಳು. ಮೂಲಭೂತ ಸೌಕರ್ಯ ಖಾತೆ ಸಚಿವರಾದ ವಿ. ಸೋಮಣ್ಣ ಸರ್ ಹಾಗು ಉಸ್ತುವಾರಿ ಸಚಿವರಾದ ಎಸ್ಟಿ ಸೋಮಶೇಖರ್ ಸರ್ ರಿಗೂ ಕೃತಜ್ಞತೆಗಳು.pic.twitter.com/Kn97VmB5A1
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + twenty =
Remember me
