ಮೈಸೂರು:ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬನ್ನೂರು ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ. ವಿಧವೆಯೊಂದಿಗೆ ಏಕಾಂತದಲ್ಲಿದ್ದಾಗ ಬೇರೊಬ್ಬ ವ್ಯಕ್ತಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್​ ಮೇಲ್ ಮಾಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ:ಅತ್ತೆಯ ತಲೆ ಒಡೆದು, ಕಣ್ಣು ಕಿತ್ತ ಸೊಸೆ! ಭೀಕರ ಕೊಲೆಯ ಹಿಂದಿದೆ ನೋವಿನ ಕಥೆ
ಸ್ವಾಮಿ ಹೆಸರಿನ ಯುವಕ ವಿಧವೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ಅದೇ ಊರಿನ ಮುಕುಂದನಿಗೆ ತಿಳಿದಿತ್ತು. ಜ.16ರಂದು ರಾತ್ರಿ ಸ್ವಾಮಿ ವಿಧವೆ ಮನೆಗೆ ಹೋಗುವುದನ್ನು ಗಮನಿಸಿದ್ದ. ಅವರಿಬ್ಬರು ಏಕಾಂತದಲ್ಲಿದ್ದಾಗ ಮನೆಗೆ ನುಗ್ಗಿದ ಮೋಹನ್​, ಜೋಡಿಯನ್ನು ನಗ್ನಗೊಳಿಸಿ ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದ. ನನ್ನ ಜತೆ ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಇದನ್ನೂ ಓದಿ:VIDEO: ಮೀನುಪ್ರಿಯರಿಗೆ ಹಬ್ಬಬೋ ಹಬ್ಬ… ಪುಕ್ಕಟೆ ಸಿಕ್ಕ ‘ಫ್ರೆಷ್’​ ಮೀನನ್ನು ಮುಗಿಬಿದ್ದು ಬಾಚಿಕೊಂಡ್ರು…
ಘಟನೆಯಿಂದಾಗಿ ಮನನೊಂದಿದ್ದ ಸ್ವಾಮಿ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಕುಟುಂಬ ಅಂತ್ಯಸಂಸ್ಕಾರ ಮಾಡಿ ಸುಮ್ಮನಾಗಿತ್ತು. ಆದರೆ ಇದೀಗ ಆತನೊಂದಿಗೆ ಸಂಬಂಧದಲ್ಲಿದ್ದ ವಿಧವೆ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದಾಳೆ. ನಡೆದ ಘಟನೆಯನ್ನು ವಿವರಿಸಿದ್ದು, ಅದೇ ಕಾರಣಕ್ಕೆ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾಳೆ. ತಮ್ಮನ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸ್ವಾಮಿಯ ಸಹೋದರ ಬಾಬು ದೂರು ದಾಖಲಿಸಿದ್ದಾರೆ. ಬನ್ನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
