ಬೆಂಗಳೂರು:ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವನ್ನು ಸರಳವಾಗಿ ಆಚರಿಸುವ ನಿರ್ಧಾರದಂತೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆಗೆ ಭಾನುವಾರ ಸಭೆ ನಡೆಸಿದ ಬಿಎಸ್​ವೈ, ಜನದಟ್ಟಣೆಯಾಗದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ. ಅಲ್ಲದೆ, ದೇಶ-ವಿದೇಶಗಳ ಪ್ರವಾಸಿಗರ ಮೇಲೆ ನಿಗಾವಹಿಸಬೇಕು ಎಂದು ಸೂಚಿಸಿದರು.
ಕರೊನಾತಂಕದ ನಡುವೆಯೂ ಸಂಪ್ರದಾಯ ಮತ್ತು ಪರಂಪರೆಗೆ ಚ್ಯುತಿಯಾಗದಿರಲೆಂದು ದಸರಾ ಹಬ್ಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಕಾರ್ಯಕ್ರಮಗಳನ್ನು ಅರಮನೆ, ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿ ಏರ್ಪಡಿಸಬೇಕು. ಪ್ರತಿಯೊಂದರಲ್ಲಿ ಹೆಚ್ಚಿನ ಮುತುವರ್ಜಿವಹಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಆರ್ಥಿಕ ನೆರವು:ಅರಮನೆ ಹಾಗೂ ಪ್ರಮುಖ ಬೀದಿಗಳಿಗೆ ವಿದ್ಯುತ್ ದೀಪಾಲಂಕಾರ ಅನಗತ್ಯ. ಈಗಾಗಲೆ ತಿಳಿಸಿದ ಪ್ರಕಾರ ಕಾರ್ಯಕ್ರಮಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ಬಿಎಸ್​ವೈ ತಿಳಿಸಿದರು ಎನ್ನಲಾಗಿದೆ.
ದಸರಾ ಮಹೋತ್ಸವ ಉದ್ಘಾಟನೆಗಾಗಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ಅ.12ರಂದು ಬೆಳಗ್ಗೆ 11.30ಕ್ಕೆ ಅಧಿಕೃತವಾಗಿ ಆಹ್ವಾನಿಸಲಾಗುತ್ತದೆ.
ದೇಶದ 8 ಬೀಚ್​ಗಳಿಗೆ ಅಂತಾರಾಷ್ಟ್ರೀಯ ಮಟ್ಟದ ‘ಬ್ಲೂ ಫ್ಲ್ಯಾಗ್​’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
