ಬೆಂಗಳೂರು:ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲುಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.ದಸರಾ ಹಬ್ಬವನ್ನು ಅಕ್ಟೋಬರ್ 15, 2023 ರಂದು ಬೆಳಗ್ಗೆ 10.15 ರಿಂದ 10.30 ರ ಸಮಯದಲ್ಲಿ ಉದ್ಘಾಟಿಸಲಾಗುವುದು. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುತ್ತಮುತ್ತಲಿನ ಪ್ರದೇಶದಲ್ಲೂ ದೀಪಾಲಂಕಾರ:ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ. ಜತೆಗೆ ಈ ಸಾರಿ ಸುತ್ತಮುತ್ತಲಿನ ಪ್ರದೇಶಗಳಿಗೂ ದೀಪಾಲಂಕಾರ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲೆಗಳ ವೈಶಿಷ್ಟ್ಯತೆ ಜತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ತಿಳಿಸಲಾಗಿದೆ ಎಂದರು.
ವಸ್ತು ಪ್ರದರ್ಶನ:ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿರುವುದಾಗಿ ತಿಳಿಸಿದರು.
ಸ್ಥಳೀಯ ಕಲಾವಿದರಿಗೆ ಆದ್ಯತೆ:ಎಲ್ಲ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ನಿರ್ಧರಿಸಲಾಗಿದೆ ಎಂದರು.
ಪ್ರವಾಸೋದ್ಯಮಕ್ಕೆ ಒತ್ತು:ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಯಾವುದೇ ತೊಂದರೆಗಳಾಗದಂತೆ ಒದಗಿಸಲಾಗುತ್ತದೆ ಎಂದು ತಿಳಿಸಿದರು.ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ ಎಂದರು.
ಏರ್ ಶೋ :ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸುವುದಾತಿ ತಿಳಿಸಿದರು.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಪ್ರಮುಖ ತೀರ್ಮಾನಗಳು:* ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ನಿರ್ಣಯ.*ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ.*ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನ.* ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ನಿರ್ಣಯ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
