ಮೈಸೂರು:ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್​ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಷಯ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ದುಡ್ಡಿದ್ದರೆ ಏನು ಬೇಕಾದರು ಸಿಗುತ್ತದೆ ಎಂಬುದಕ್ಕೆ ನಟ ದರ್ಶನ್​ ಅವರು ಜೈಲಿನಲ್ಲಿ ವಾಸಿಸುತ್ತಿರುವ ರೀತಿಯೇ ಪ್ರಮುಖ ಸಾಕ್ಷಿ ಎಂದು ಜನ ಕಿಡಿಕಾರಿದ್ದಾರೆ. ರಾಜ್ಯಾತಿಥ್ಯ ನೀಡುತ್ತಿರುವುದಕ್ಕೆ ಸಾಕ್ಷಿಯಾಗಿ ಕೆಲ ಫೋಟೋ ಹಾಗೂ ವಿಡಿಯೋಗಳು ಲೀಕ್​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ರಾಜ್ಯದ ಪೊಲೀಸ್​ ವ್ಯವಸ್ಥೆಯ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.
ನಟ ದರ್ಶನ್​ ಕೈಯಲ್ಲಿ ಸಿಗರೇಟ್​ ಹಾಗೂ ರೌಡಿಶೀಟರ್​ ಓರ್ವನ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿರುವ ವಿಚಾರ ಹೊರಬರುತ್ತಿದ್ದಂತೆ ಜೈಲಿನ 7 ಸಿಬ್ಬಂದಿಯನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೆ, ದರ್ಶನ್​ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಿದ್ದು, ಜನರು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ. ಇತ್ತ ಈ ಘಟನೆ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಈ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್​ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಮೊದಲಿಗೆ ನೀವು ಈ ವಿಚಾರವನ್ನು ಗೃಹ ಸಚಿವರ ಬಳಿ ಕೇಳಬೇಕಿದೆ. ನಮ್ಮ ಪ್ರಕಾರ ಜೈಲಿನಲ್ಲಿರುವಾಗ ಒಬ್ಬ ವ್ಯಕ್ತಿಯು ಅಲ್ಲಿನ ಶಿಸ್ತು ಹಾಗೂ ನಿಯಮಗಳನ್ನು ಪಾಲಿಸಬೇಕಿದೆ. ಯಾರೇ ಆಗಿರಲಿ ಒಂದು ಪ್ರಕ್ರಿಯೆ ಇದೆ. ಎಲ್ಲರಿಗೂ ಒಂದೇ ನಿಯಮ ಇರಬೇಕೆಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್​ ಹೇಳಿದ್ದಾರೆ.
ಇದನ್ನೂ ಓದಿ:ಮಿಸ್​ ಇಂಡಿಯಾ ಲಿಸ್ಟ್​​ಅನ್ನು ಚೆಕ್​ ಮಾಡಿ ಅದರಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಕಾಣುವುದಿಲ್ಲ: ರಾಹುಲ್​ ಗಾಂಧಿ
ನಟ ದರ್ಶನ್​ ಅವರ ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸ್ಸೇಜ್​ ಮಾಡಿದ್ದ ಎಂಬ ವಿಚಾರ ತಿಳಿದು ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ಜೂನ್​ 08ರಂದು ರಾಜಾರಾಜೇಶ್ವರಿ ನಗರದಲ್ಲಿರುವ ಪಟ್ಟಣಗೆರೆ ಶೆಡ್​ನಲ್ಲಿ ಭೀಕರವಾಗಿ ಹೊಡೆದು ಕೊಲೆ ಮಾಡಲಾಗಿತ್ತು. ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ.  ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗುತ್ತಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × five =
Remember me
